ಡಿಜಿಟಲ್ ಖಾತೆಯ ಮೂಲಕ ನೀಡಿದ ಪದವಿಗಳು, ಅಂಕಪಟ್ಟಿಗಳು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ ಮನವಿ ಮಾಡಿದೆ.
ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಡಿಜಿಲಾಕರ್ ಪ್ಲಾಟ್‌ಫಾರ್ಮ್ ವಿದ್ಯಾರ್ಥಿಗಳ ಪದವಿ, ಮಾರ್ಕ್-ಶೀಟ್ ಮತ್ತು ಇತರ ದಾಖಲೆಗಳನ್ನು ನೀಡಲಾದ ದಾಖಲೆಗಳ ವಿಭಾಗಕ್ಕೆ ಎಲೆಕ್ಟ್ರಾನಿಕ್ ರೂಪದಲ್ಲಿ ಒಮ್ಮೆ ಮೂಲದಿಂದ ಡಿಜಿಲಾಕರ್- ಎನ್‌ಎಡಿ ಪ್ಲಾಟ್‌ಫಾರ್ಮ್ ಮೂಲಕ ಆಪ್‌ಲೋಡ್ ಮಾಡುವ ಸೌಲಭ್ಯವನ್ನು ಹೊಂದಿದೆ. ಡಿಜಿಲಾಕರ್ ಪ್ಲಾಟ್‌ಫಾರ್ಮ್ ನಲ್ಲಿ ಲಭ್ಯವಿರುವ ಈ ಎಲೆಕ್ಟ್ರಾನಿಕ್ ದಾಖಲೆಗಳು ಮಾಹಿತಿ ತಂತ್ರಜ್ಞಾನ ಕಾಯಿದೆ, 2೦೦೦ರ ನಿಬಂಧನಗಳ ಪ್ರಕಾರ ಮಾನ್ಯ ದಾಖಲೆಗಳಾಗಿವೆ ಎಂದು ಯುಜಿಸಿ ಹೇಳಿದೆ.
ಎನ್‌ಎಡಿ ಕಾರ್ಯಕ್ರಮದ ವ್ಯಾಪ್ತಿಯನ್ನು ಹೆಚ್ಚಿಸಲು ಎಲ್ಲಾ ಶೈಕ್ಷಣಿಕ ಸಂಸ್ಥೆಗಳು ಡಿಜಿಲಾಕರ್ ಖಾತೆಯಲ್ಲಿ ನೀಡಲಾದ ದಾಖಲೆಗಳಲ್ಲಿ ಲಭ್ಯವಿರುವ ಪದವಿ, ಮಾರ್ಕ್-ಶೀಟ್‌ಘಲು ಮತ್ತು ಇತರ ದಾಖಲೆಗಳನ್ನು ಮಾನ್ಯ ದಾಖಲೆಗಳಾಗಿ ಸ್ವೀಕರಿಸಲು ವಿನಂತಿಸಲಾಗಿದೆ ಎಂದು ಆಯೋಗವು ಹೇಳಿದೆ.
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…
ಬೇಸಿಗೆ ಕಾಲ ಪ್ರಾರಂಭವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ನಿರ್ವಹಣೆ ಹಾಗೂ ಕಾಡ್ಗಿಚ್ಚು ನಿರ್ವಹಣೆ…