ಕೇಂದ್ರ ಬುಡಕಟ್ಟು ಸಚಿವಾಲಯದಿಂದ ಅಕ್ಟೋಬರ್ 2 ರಂದು ಘೋಷಣೆಯಾಗಲಿರುವ ಪ್ರಧಾನಮಂತ್ರಿ ಜನಜಾತಿಯ ಉನ್ನತಿ ಗ್ರಾಮ ಅಭಿಯಾನ ಯೋಜನೆಗೆ ಗದಗ ಜಿಲ್ಲೆಯ ನಾಲ್ಕು ಗ್ರಾಮಗಳು ಹಾಗೂ ದಾವಣಗೆರೆ ಜಿಲ್ಲೆಯ 44 ಗ್ರಾಮಗಳು ಆಯ್ಕೆಯಾಗಿವೆ.
ಬುಡಕಟ್ಟು ಸಮುದಾಯಗಳ ಸಾಮಾಜಿಕ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಈ ಯೋಜನೆ ಮಹತ್ವದ ಪಾತ್ರ ವಹಿಸಲಿದೆ. ಪರಿಶಿಷ್ಟ ಪಂಗಡ ಜನಾಂಗದವರು ಹೆಚ್ಚಾಗಿರುವ ಚಿತ್ರದುರ್ಗ ಜಿಲ್ಲೆಯ ಆಯ್ದ 87 ಗ್ರಾಮಗಳನ್ನು ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ.
ಈ ಯೋಜನೆಯಲ್ಲಿ ಪರಿಶಿಷ್ಟ ಪಂಗಡದ ಜನರಿಗೆ ಉಪಯೋಗವಾಗುವ ವಿವಿಧ 17 ಇಲಾಖೆಗಳು, 25 ಪ್ರಮುಖ ವಿಷಯಗಳನ್ನು ಒಳಗೊಂಡಿರುತ್ತದೆ. ಪರಿಶಿಷ್ಟ ಪಂಗಡದ ಜನರು ಹೆಚ್ಚು ವಾಸಿಸುವ ಗ್ರಾಮಗಳನ್ನು ಈ ಯೋಜನೆಯಡಿ ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಗ್ರಾಮಗಳಲ್ಲಿ ಸಂಪರ್ಕ ರಸ್ತೆ ಅಭಿವೃದ್ಧಿ, ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುದೀಕರಣ, ಕೃಷಿ, ತೋಟಗಾರಿಕೆ, ಮೊಬೈಲ್ ಹಾಗೂ ಇಂಟರ್‌ನೆಟ್ ಸಂಪರ್ಕ ಮುಂತಾದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತದೆ .
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…