ವಾಡಿಕೆಯಂತೆ ಸುರಿಯದ ಮುಂಗಾರು ಮಳೆ | ಪ್ರಮುಖ ಜಲಾಶಯಕ್ಕೆ ಅತೀ ಕಡಿಮೆ ಒಳಹರಿವು |

June 17, 2024
2:20 PM

ಮುಂಗಾರು ಮಳೆ ಏನೋ ಆರಂಭವಾಗಿದೆ. ಆದರೆ ನಿರೀಕ್ಷೆ ತಕ್ಕಂತೆ ಮಳೆ ಬೀಳುತ್ತಿಲ್ಲ. ಕರ್ನಾಟಕ(Karnataka) ರಾಜ್ಯಾದ್ಯಂತ ಅಲ್ಲಲ್ಲಿ ಕೆಲವು ಪ್ರದೇಶಗಳಲ್ಲಿ ಮಾತ್ರ ಮಳೆ(Rain) ಆಗುತ್ತಿದೆ. ಮೊದಲಿನ ರೀತಿ ಮುಂಗಾರು ಮಳೆ ಭಾರೀ ಆಗದಿದ್ದರೂ ಕಳೆದ ಕೆಲ ದಿನಗಳಿಂದ ಹಗುರದಿಂದ ಸಾಧಾರಣ ಮಳೆಯಂತೂ ಮುಂದುವರಿದಿದೆ. ಇದು ಈ ಭಾಗದ ಜಲಾಶಯಗಳ (Dam Water Level Today) ಮೇಲೆ ಪರಿಣಾಮ ಬೀರಿದೆ. ಹಳೆ ಮೈಸೂರು(Mysure) ಭಾಗದ ಮಂಡ್ಯ(Mandya), ಹಾಸನ(Hasan), ಚಾಮರಾಜನಗರ(Chamaraj nagara), ಕೊಡಗು(Kodagu) ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಸಾಧಾರಣ ತುಂತುರು ಮಳೆಯಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ತಿಳಿಸಿದೆ.

Advertisement
Advertisement
Advertisement

ಕಬಿನಿ ಜಲಾಶಯದಲ್ಲಿ ಕಡಿಮೆಯಾದ ಒಳಹರಿವು ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯ ಕಬಿನಿ ಜಲಾಶಯಕ್ಕೆ ಒಳಹರಿವು ತೀರ ಕಡಿಮೆ ಯಾಗಿದೆ ಕಳೆದ 5 ದಿನಗಳಲ್ಲಿ 2 ಸಾವಿರ ಕ್ಯೂಸೆಕ್‌ನಷ್ಟಿದೆ. ಒಳಹರಿವು ದಿನದಿಂದ ದಿನಕ್ಕೆ ತೀರ ಕಡಿಮೆಯಾಗುತ್ತಿದೆ. 2284 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 2263.78 ಅಡಿಗಳಾಗಿದ್ದು, ಜಲಾಶಯಕ್ಕೆ ಕೇವಲ 549 ಕ್ಯೂಸೆಕ್‌ ನೀರು ಮಾತ್ರ ಹರಿದು ಬರುತ್ತಿದೆ. ಜಲಾಶಯದಿಂದ 300 ಕ್ಯೂಸೆಕ್‌ ನೀರನ್ನು ಅನೇಕ ಉದ್ದೇಶಗಳಿಗೆ ಜಲಾಶಯದಿಂದ ಹೊರ ಹರಿಸಲಾಗುತ್ತಿದೆ. ಜಲಾಶಯಕ್ಕೆ ಮುಂಗಾರು ಶುರುವಾದ ನಂತರ ಇದೇ ಮೊದಲ ಬಾರಿಗೆ ಇಷ್ಟು ಕಡಿಮೆ ಒಳಹರಿವು ಹರಿದು ಬರುತ್ತಿದೆ.

Advertisement
ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ : ಇನ್ನು ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ ಒಳಹರಿವಿನ ಮಟ್ಟ 2 ಸಾವಿರ ಕ್ಯೂಸೆಕ್‌ ಗಡಿ ದಾಟಿದೆ. 124.80 ಅಡಿಗಳ ಸಾಮರ್ಥ್ಯವಿರುವ ಜಲಾಶಯದ ಇಂದಿನ ಮಟ್ಟ 87 ಅಡಿಗಳಾಗಿದೆ. ಜಲಾಶಯಕ್ಕೆ 2120 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 461 ಕ್ಯೂಸೆಕ್‌ ನೀರನ್ನು ಹೊರಬಿಡಲಾಗುತ್ತಿದೆ. ರಾಜ್ಯದ ಹಲವೆಡೆ ಮಳೆ ಕ್ಷೀಣಿಸುತ್ತಿದೆ ಅನ್ನೋವಾಗಲೇ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಜೂನ್‌ 16 ರಿಂದ ಜೂನ್‌ 20 ರವರೆಗೆ ಭಾರೀ ಗಾಳಿ, ಮಿಂಚು ಹಾಗೂ ಗುಡುಗು ಸಹಿತ ಜೋರಾಗಿ ಮಳೆ ಸುರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆ 5 ದಿವಸಗಳ ಕಾಲ ಉತ್ತರ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.  ಕಲಬುರಗಿ, ಗದಗ, ಯಾದಗಿರಿ, ಧಾರವಾಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು ಮುಂತಾದ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇನ್ನೊಂದೆಡೆ ಬೆಂಗಳೂರು ನಗರ ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಸ್ವಲ್ಪ ಮಟ್ಟಿಗೆ ಕಾಣಿಸಿಕೊಂಡಿದೆ. ಮುಂಗಾರು ಮಳೆ ಜೂನ್‌ 2 ರಂದು ಆಗಮಿಸಿದ್ದರೂ ಹೆಚ್ಚಿನ ಪ್ರಭಾವ ಬೀರಿಲ್ಲ. ಇದರಿಂದ ಮಳೆ ಪ್ರಮಾಣವೂ ಕಡಿಮೆಯಾಗುತ್ತಿದೆ. ಆದರೂ ಮೇ ಹಾಗೂ ಜೂನ್‌ ತಿಂಗಳಲ್ಲಿ ಇದುವರೆಗೆ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 24.11.2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ದೂರವಾದ ಮಳೆಯ ಸಾಧ್ಯತೆ
November 24, 2024
12:05 PM
by: ಸಾಯಿಶೇಖರ್ ಕರಿಕಳ
ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |
November 24, 2024
7:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕಿರೋಗ ನಿರ್ವಹಣಾ ವಿಧಾನಗಳು ಹೇಗೆ..?
November 24, 2024
7:09 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-11-2024 | ರಾಜ್ಯದಲ್ಲಿ ಒಣಹವೆ ಮುಂದುವರಿಕೆ | ನ.28 ರಿಂದ ಕೆಲವು ಕಡೆ ಮಳೆ ಸಾಧ್ಯತೆ |
November 23, 2024
12:23 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror