ಅಕಾಲಿಕ ಮಳೆ | ಕಾಫಿ–ಅಡಿಕೆ ಬೆಳೆಗೆ ಸಂಕಷ್ಟ

January 15, 2026
6:13 AM
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮುಂದುವರಿದ ಆಕಾಲಿಕ ಮಳೆಯಿಂದ ಕಾಫಿ ಬೆಳೆಗಳಿಗೆ ಹಾನಿಯ ಭೀತಿ ಎದುರಾಗಿದೆ. ಕೊಯ್ಲು ಹಾಗೂ ಒಣಗಿಸುವ ಪ್ರಕ್ರಿಯೆಗೆ ಅಡಚಣೆ ಉಂಟಾಗಿರುವುದರಿಂದ ಕಾಫಿ ಬೆಳೆಗಾರರಲ್ಲಿ ಆತಂಕ ಹೆಚ್ಚಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಚಿಕ್ಕಮಗಳೂರು ನಗರ ಸೇರಿದಂತೆ ಜಿಲ್ಲೆಯ ಮಲೆನಾಡು ಹಾಗೂ ಗಿರಿ ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಸುರಿಯುತ್ತಿದ್ದು, ಆಕಾಲಿಕ ಮಳೆಯಿಂದ ಕೃಷಿ ಚಟುವಟಿಕೆಗಳಿಗೆ ಅಡಚಣೆ ಉಂಟಾಗಿದೆ.

Advertisement

ಮೂಡಿಗೆರೆ, ಕಳಸ, ಬಾಳೆಹೊನ್ನೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದ್ದು, ಹಲವೆಡೆ ಕೊಯ್ಲು ಮಾಡಿ ಒಣ ಹಾಕಿದ್ದ ಕಾಫಿ ಬೆಳೆಗಳು ನೀರಿಗೆ ಕೊಚ್ಚಿಹೋಗಿರುವ ವರದಿಗಳಿವೆ. ನಿರಂತರ ಮಳೆಯು ಮುಂದುವರಿದರೆ ಗಿಡದಲ್ಲಿರುವ ಕಾಫಿ ಉದುರುವ ಸಾಧ್ಯತೆ ಇರುವುದಲ್ಲದೆ, ಕೊಯ್ಲು ಮಾಡಿದ ಕಾಫಿಯನ್ನು ಸರಿಯಾಗಿ ಒಣಗಿಸಲು ಸಾಧ್ಯವಾಗದೇ ಗುಣಮಟ್ಟ ಕುಸಿಯುವ ಭೀತಿ ಎದುರಾಗಿದೆ ಎಂದು ಕಾಫಿ ಬೆಳೆಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ, ಅಡಿಕೆ ಕೃಷಿಕರೂ ಮಳೆಯ ಪರಿಣಾಮದಿಂದ ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಅಡಿಕೆ ತೋಟಗಳಲ್ಲಿ ಹೆಚ್ಚಿದ ತೇವಾಂಶದಿಂದ ಕಾಯಿ ಉದುರುವಿಕೆ, ಶಿಲೀಂಧ್ರ ರೋಗಗಳ ಹರಡುವಿಕೆ ಹಾಗೂ ಒಣಗಿಸುವ ಹಂತದಲ್ಲಿ ತೊಂದರೆಗಳು ಉಂಟಾಗುವ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಕೃಷಿಕರ ಪ್ರಕಾರ, ಹವಾಮಾನದಲ್ಲಿ ಸ್ಥಿರತೆ ಇಲ್ಲದಿರುವುದರಿಂದ ಕೊಯ್ಲು, ಒಣಗಿಸುವಿಕೆ ಮತ್ತು ಮಾರುಕಟ್ಟೆ ಸಾಗಣೆಯ ಹಂತಗಳಲ್ಲೂ ಸಂಕಷ್ಟ ಇದೆ. ಮುಂದಿನ ದಿನ ಕೆಲವು ದಿನಗಳಲ್ಲಿ ಮಳೆ ತಗ್ಗದಿದ್ದರೆ ಕಾಫಿ ಹಾಗೂ ಅಡಿಕೆ ಎರಡೂ ಬೆಳೆಗಳಿಗೆ ನಷ್ಟದ ಪ್ರಮಾಣ ಹೆಚ್ಚಾಗುವ ಆತಂಕವಿದೆ.

Advertisement
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.30 ರಿಂದ ಮೂಡಬಿದ್ರಿಯಲ್ಲಿ ಅಗ್ನಿವೀರ್ ನೇಮಕಾತಿ ರ‍್ಯಾಲಿ : | 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
January 16, 2026
9:37 PM
by: ದ ರೂರಲ್ ಮಿರರ್.ಕಾಂ
ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರಿಗೆ ಸುಳ್ಳು ಕರೆ | ಲೈಸೆನ್ಸ್ ಹೆಸರಿನಲ್ಲಿ ಹಣ ಕೇಳುವ ವಂಚನೆ – ಎಚ್ಚರಿಕೆ
January 16, 2026
9:31 PM
by: ದ ರೂರಲ್ ಮಿರರ್.ಕಾಂ
ದ.ಕ. ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಸ್ಮಾರ್ಟ್ ಬೋರ್ಡ್‌
January 16, 2026
7:01 AM
by: ದ ರೂರಲ್ ಮಿರರ್.ಕಾಂ
ಕೋಲಾರದಲ್ಲಿ ಕುರಿ ಸಾಕಾಣಿಕೆ | ಕೃಷಿ ಜತೆ ಲಾಭದಾಯಕ ಉಪಕಸುಬು
January 16, 2026
6:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror