ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.
ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.
ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.
ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ 71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…