Advertisement
ಪ್ರಮುಖ

#NoRain| ಮಹಾರಾಷ್ಟ್ರದಲ್ಲಿ ಎಂದಿನಂತೆ ಬಾರದ ಮಳೆ : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆ ಕೊರತೆ : ಭಾರಿ ನೀರಿನ ಅಭಾವ ಸಾಧ್ಯತೆ

Share

ಮುಂಗಾರು ಮಳೆ ವಾಡಿಕೆಗಿಂತ ತಡವಾಗಿ ರಾಜ್ಯಕ್ಕೆ ಬಂದರು ಕರ್ನಾಟಕದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭರ್ಜರಿ ಮಳೆ#Rainಯಾಗುತ್ತಿದೆ. ಆದರೆ ಉತ್ತರ ಕರ್ನಾಟಕ#North karnataka ಭಾಗದಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ.

ಹೀಗಾಗಿ ಜಲಾಶಯಗಳ ನೀರನ್ನು ಕುಡಿಯಲು ಮಾತ್ರ ಬಳಸುವಂತೆ ಆಲಮಟ್ಟಿ, ಘಟಪ್ರಭಾ, ಮಲಪ್ರಭಾ ಜಲಾಶಯ ಅಧಿಕಾರಿಗಳಿಗೆ ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ಸೂಚನೆ ನೀಡಿದ್ದಾರೆ.  ಬೆಳಗಾವಿ ವಿಭಾಗದ ಏಳು ಜಿಲ್ಲೆಗಳಲ್ಲಿ ಮಳೆಯ ತೀವ್ರ ಕೊರತೆ ಉಂಟಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ನೀಗಿಸುವ ಉದ್ದೇಶದಿಂದ ಬೆಳಗಾವಿ ಪ್ರಾದೇಶಿಕ ಆಯುಕ್ತ ಸಭೆ ನಡೆಸಲಾಗಿದೆ.

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿಯೂ ಮಳೆಯ ಅಭಾವ ಉಂಟಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆ ಮಳೆ 175 ಮಿ. ಮೀ ಆಗಿದ್ದು, ವಾಸ್ತವಿಕ 71 ಮಿ.ಮೀ ಆಗಿದೆ. ಹೀಗಾಗಿ ಶೇಕಡಾ -60ರಷ್ಟು ಕೊರತೆ ಉಂಟಾಗಿದೆ.

ಬಾಗಲಕೋಟೆ – ಬಾಗಲಕೋಟೆಯಲ್ಲಿ ವಾಡಿಕೆ 94 ಮಿ. ಮೀ ಮಳೆಯಾಗಬೇಕಿತ್ತು. ಆದರೆ 31 ಮಿ.ಮೀ ಮಳೆ ಆಗಿದ್ದು, ಶೇಕಡಾ 67ರಷ್ಟು ಮಳೆಯ ಕೊರತೆ ಉಂಟಾಗಿದೆ.
ವಿಜಯಪುರ – ವಿಜಯಪುರದಲ್ಲಿ ವಾಡಿಕೆ 98 ಮಿ. ಮೀಮಳೆಯಾಗಬೇಕಿತ್ತು. ಆದರೆ 47 ಮಿ.ಮೀ ಮಳೆಯಾಗಿದ್ದು, ಶೇಕಡಾ 52 ರಷ್ಟು ಮಳೆಯ ಕೊರತೆಯಾಗಿದೆ.
ಗದಗ – ಗದಗದಲ್ಲಿ ವಾಡಿಕೆ 95 ಮಿ.‌ಮೀ ಮಳೆಯಾಗಬೇಕಿತ್ತು. ಆದರೆ 65 ಮಿ.ಮೀ ಮಳೆಯಾಗಿದ್ದು, ಶೇಕಡಾ 32 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಹಾವೇರಿ – ಹಾವೇರಿಯಲ್ಲಿ ವಾಡಿಕೆ 146 ಮಿ. ಮೀ ಮಳೆಯಾಗಬೇಕಿತ್ತು. ಆದರೆ 75 ಮಿ.ಮೀ.ಮಳೆಯಾಗಿದೆ. ಶೇಕಡಾ 49 ರಷ್ಟು ಮಳೆಯ ಕೊರತೆಯಾಗಿದೆ.

ಧಾರವಾಡ – ಧಾರವಾಡದಲ್ಲಿ ವಾಡಿಕೆ 147 ಮಿ. ಮೀ ಮಳೆಯಾಗಬೇಕಿತ್ತು. ಆದರೆ  71 ಮಿ.ಮೀ ಮಳೆಯಾಗಿದೆ. ಶೇಕಡಾ 51 ರಷ್ಟು ಮಳೆಯ ಕೊರತೆ ಉಂಟಾಗಿದೆ.

ಉತ್ತರ ಕನ್ನಡ – ಉತ್ತರ ಕನ್ನಡದ ವಾಡಿಕೆ ಮಳೆ 859 ಮಿ.ಮೀ ಆಗಿದ್ದು, ಸದ್ಯ 506 ಮಿ.ಮೀ ಮಳೆ ಆಗಿದೆ. ಈವರೆಗೆ ಶೇಕಡಾ 41 ರಷ್ಟು ಮಳೆಯ ಕೊರತೆ ಉಂಟಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

6 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago