ಕಾಡಿನ ಬೆಂಕಿ ಪತ್ತೆಗೆ ದೂರಸಂವೇದಿ ತಂತ್ರಜ್ಞಾನದ ಬಳಕೆ | ಕಾಡ್ಗಿಚ್ಚು ನಿಗ್ರಹಕ್ಕೆ ಕಟ್ಟೆಚ್ಚರ ವಹಿಸಲು ಇಲಾಖೆಗೆ ಸೂಚನೆ |

January 30, 2024
10:43 PM
ಕಾಡಿಗೆ ಬೆಂಕಿಯಿಂದ ಹೆಚ್ಚಿನ ಹಾನಿ ಆಗದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಇಲಾಖೆಗೆ ಸೂಚಿಸಿದ್ದಾರೆ.

ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ಆ ಬಗ್ಗೆ ಕೆಲವೇ ಗಂಟೆಗಳಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.

ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾಡ್ಗಿಚ್ಚು ತಡೆ – ನಿಯಂತ್ರಣಕ್ಕೆ ಸಿದ್ಧತೆ ಕುರಿತಂತೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ. ಬೆಂಕಿ ಕಾಣಿಸಿಕೊಂಡ ಮಾಹಿತಿ ಸಕಾಲದಲ್ಲಿ ಲಭ್ಯವಾದರೆ, ಕಾಡಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಕಾಡ್ಗಿಚ್ಚು ತಡೆಯಲು ಮತ್ತು ನಿಯಂತ್ರಿಸಲು  ಸಚಿವರು ಸೂಚನೆ ನೀಡಿದರು.

ರಾಜ್ಯದ ಕೆಲವು ಅರಣ್ಯಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪದೇಪದೆ ಕಾಡ್ಗಿಚ್ಚು ಸಂಭವಿಸುತ್ತಿರುವುದನ್ನು 15 ವರ್ಷಗಳ ದತ್ತಾಂಶದಿಂದ ಕ್ರೋಡೀಕರಿಸಿದ್ದು, ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ, ಈ ಪ್ರದೇಶಗಳಲ್ಲಿ ಹೆಚ್ಚಿನ ಅಗ್ನಿ ವೀಕ್ಷಕರನ್ನು (ಫೈರ್ ವಾಚರ್ಸ್) ನಿಯೋಜಿಸಲು ಮತ್ತು ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲು ಇಡುವಂತೆ ಸಚಿವ ಖಂಡ್ರೆ  ಸೂಚಿಸಿದರು.

ಕೆಲವು ಕಡೆಗಳಲ್ಲಿ ಉದ್ದೇಶಪೂರ್ವಕವಾಗಿ ಕೆಲವು ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವುದೂ ಬೆಳಕಿಗೆ ಬಂದಿದ್ದು, ಇಂತಹ ವಿದ್ರೋಹಿಗಳ ಮತ್ತು ಸಂಚುಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ
October 2, 2026
12:46 PM
by: ಸಾಯಿಶೇಖರ್ ಕರಿಕಳ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ – ಕಾಫಿ ಬಗ್ಗೆ ಜಾಗೃತಿಗೆ ಚಿಕ್ಕಮಗಳೂರಿನಲ್ಲಿ ಸೈಕಲ್ ಜಾಥಾ
October 2, 2026
7:28 AM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ ಕ್ರಿಕೆಟ್‌ : ಚಿನ್ನದ ಪದಕಕ್ಕಾಗಿ ಭಾರತ–ಪಾಕಿಸ್ತಾನ ಫೈನಲ್‌
October 2, 2026
7:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror