ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡರೂ ಆ ಬಗ್ಗೆ ಕೆಲವೇ ಗಂಟೆಗಳಲ್ಲಿ ಮಾಹಿತಿ ನೀಡುವ ದೂರಸಂವೇದಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ಸಚಿವ ಈಶ್ವರ ಖಂಡ್ರೆ ಇಲಾಖೆಗಳಿಗೆ ಸೂಚನೆ ನೀಡಿದ್ದಾರೆ.
ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ ಕಾಡ್ಗಿಚ್ಚು ತಡೆ – ನಿಯಂತ್ರಣಕ್ಕೆ ಸಿದ್ಧತೆ ಕುರಿತಂತೆ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಸಚಿವರು ಸೂಚನೆ ನೀಡಿದ್ದಾರೆ. ಬೆಂಕಿ ಕಾಣಿಸಿಕೊಂಡ ಮಾಹಿತಿ ಸಕಾಲದಲ್ಲಿ ಲಭ್ಯವಾದರೆ, ಕಾಡಿಗೆ ಹೆಚ್ಚಿನ ಹಾನಿ ಆಗದಂತೆ ತಡೆಯಬಹುದು. ಈ ನಿಟ್ಟಿನಲ್ಲಿ ಎಲ್ಲ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಕಾಡ್ಗಿಚ್ಚು ತಡೆಯಲು ಮತ್ತು ನಿಯಂತ್ರಿಸಲು ಸಚಿವರು ಸೂಚನೆ ನೀಡಿದರು.
ರಾಜ್ಯದ ಕೆಲವು ಅರಣ್ಯಗಳ ನಿರ್ದಿಷ್ಟ ಪ್ರದೇಶಗಳಲ್ಲಿ ಪದೇಪದೆ ಕಾಡ್ಗಿಚ್ಚು ಸಂಭವಿಸುತ್ತಿರುವುದನ್ನು 15 ವರ್ಷಗಳ ದತ್ತಾಂಶದಿಂದ ಕ್ರೋಡೀಕರಿಸಿದ್ದು, ಹಾಟ್ ಸ್ಪಾಟ್ ಗಳನ್ನು ಗುರುತಿಸಲಾಗಿದೆ, ಈ ಪ್ರದೇಶಗಳಲ್ಲಿ ಹೆಚ್ಚಿನ ಅಗ್ನಿ ವೀಕ್ಷಕರನ್ನು (ಫೈರ್ ವಾಚರ್ಸ್) ನಿಯೋಜಿಸಲು ಮತ್ತು ಡ್ರೋನ್ ಕ್ಯಾಮರಾಗಳ ಮೂಲಕ ಕಣ್ಗಾವಲು ಇಡುವಂತೆ ಸಚಿವ ಖಂಡ್ರೆ ಸೂಚಿಸಿದರು.
ಕೆಲವು ಕಡೆಗಳಲ್ಲಿ ಉದ್ದೇಶಪೂರ್ವಕವಾಗಿ ಕೆಲವು ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚುತ್ತಿರುವುದೂ ಬೆಳಕಿಗೆ ಬಂದಿದ್ದು, ಇಂತಹ ವಿದ್ರೋಹಿಗಳ ಮತ್ತು ಸಂಚುಕೋರರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…
ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…
ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…
ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…
ಅಡಿಕೆ ಕ್ಷೇತ್ರದಲ್ಲಿ ಉತ್ಪಾದನೆ, ದಾಸ್ತಾನು, ಬೇಡಿಕೆ, ಆಮದು, ಮಾರುಕಟ್ಟೆ ಮತ್ತು ಉತ್ಪಾದನಾ ವೆಚ್ಚದ…