ಶಾಲಾ ಆವರಣವನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಲಾಗಿದೆ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಹೊರಡಿಸಿದ ಹಳೆಯ ಸುತ್ತೋಲೆಯನ್ನು ಸರ್ಕಾರ ಮರು ಬಿಡುಗಡೆ ಮಾಡಿದೆ. ಈ ಸುತ್ತೋಲೆ ಪ್ರಕಾರ ಸರ್ಕಾರಿ ಶಾಲಾ ಮೈದಾನಗಳನ್ನು ಖಾಸಗಿ ಉದ್ದೇಶಗಳಿಗಾಗಿ ಬಳಸುವುದನ್ನು ನಿಷೇಧಿಸಿದೆ. 2013 ಫೆಬ್ರವರಿ 7 ರಂದು ಹೊರಡಿಸಿದ್ದ ಸುತ್ತೋಲೆಯಲ್ಲಿ ಸರ್ಕಾರಿ ಶಾಲಾ ಮೈದಾನಗಳು ಮತ್ತು ಆವರಣಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ, ಇತರ ಚಟುವಟಿಕೆಗಳಿಗೆ ಬಳಸಬಾರದು ಎಂದು ಸ್ಪಷ್ಟವಾಗಿ ತಿಳಿಸಲಾಗಿದೆ.
ಸಂಪುಟ ಸಭೆಯಲ್ಲಿ ಕೂಡಾ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಸಂಘಟನೆಗಳು, ಖಾಸಗಿ ಸಂಘ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಚಟುವಟಿಕೆಗಳನ್ನು ಕಾನೂನು ಬದ್ಧವಾಗಿ ನಡೆಸಲು ಪೂರ್ವಾನುಮತಿ ಕಡ್ಡಾಯಗೊಳಿಸಲು ಸಂಪುಟ ತೀರ್ಮಾನ ಕೈಗೊಳ್ಳಲಾಗಿದೆ. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆಸಿದರೆ ಕ್ರಮ ಕೈಗೊಳ್ಳುವುದಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.

