ಯುವತಿಯ ಅತ್ಯಾಚಾರ ಮಾಡಿ ಕೊಲೆ | ಉತ್ತರ ಪ್ರದೇಶದಲ್ಲಿ ಮತ್ತೆ ಸದ್ದು ಮಾಡಿದ ಬುಲ್ಡೋಜರ್…!‌ |

June 27, 2023
2:13 PM

ಯುವತಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣದ ಆರೋಪಿಯ ಮನೆಯನ್ನು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಕೆಡವಿ ಹಾಕುವ ಕಾರ್ಯ ನಡೆಸಲಾಗಿದೆ. ಆರೋಪಿಯು 5 ದಿನಗಳ ಹಿಂದೆ 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ.

Advertisement

ಉತ್ತರ ಪ್ರದೇಶದ ಫತೇಪುರದಲ್ಲಿ ಮಹಮ್ಮದ್ ಸಿಕಂದರ್ ಖಾನ್ ‌ ಎಂಬಾತ 19 ವರ್ಷದ  ಯುವತಿಯ ಮೇಲೆ ಅತ್ಯಾಚಾರವೆಸಗಿದ  ನಂತರ ಆಕೆಯ ತಲೆಯನ್ನು ಇಟ್ಟಿಗೆಯಿಂದ ಪುಡಿಮಾಡಿ ಕೊಂದಿದ್ದ. ಈ ಬಗ್ಗೆ ಯುವತಿಯ ಪೋಷಕರು ಇದು ಲವ್‌ ಜಿಹಾದ್‌ ಎಂದು ಆರೋಪಿಸಿದ್ದರು.

ತಕ್ಷಣವೇ ಎಚ್ಚೆತ್ತ ಉತ್ತರ ಪ್ರದೇಶದ ಆಡಳಿತವು ಸೂಕ್ತ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚಿಸಿತ್ತು. ಆರೋಪಿಯ ಬಂಧನದ ಬಳಿಕ ಇದೀಗ ಪೊಲೀಸ್ ಅಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳ ಸಮ್ಮುಖದಲ್ಲಿ ಆರೋಪಿಯ ಮನೆ  ಕೆಡವಿ ಹಾಕುವ ಕಾರ್ಯ ನಡೆಯುತ್ತಿದೆ.

(Source : ANI )‌

ಹಿಂದೂ ಮಹಿಳೆಯೊಬ್ಬರು ಸಿಕಂದರ್ ಖಾನ್ ಅಲಿಯಾಸ್ ಸೋನು ಜೊತೆ ದೂರದ ಸಂಬಂಧ ಹೊಂದಿದ್ದರು. ಜೂನ್ 22 ರಂದು, ಅವರು ಮದುವೆ ಕಾರ್ಯಕ್ರಮಕ್ಕಾಗಿ ಉತ್ತರ ಪ್ರದೇಶದ ಫತೇಪುರಕ್ಕೆ ಭೇಟಿ ನೀಡಿದರು, ಅಲ್ಲಿ ಅವರು ಭೇಟಿಯಾಗಲು ನಿರ್ಧರಿಸಿದರು. ರಾತ್ರಿ 9 ಗಂಟೆ ಸುಮಾರಿಗೆ, ಆ ಯುವತಿ ಮದುವೆ ಹಾಲ್‌ನಿಂದ ಹೊರಹೋಗಿ ಸಿಕಂದರ್‌ ನನ್ನು ಭೇಟಿಯಾಗಿದ್ದರು. ಮರುದಿನ ಬೆಳಿಗ್ಗೆ, ಆಕೆ ಗಂಭೀರ ಗಾಯದೊಂದಿಗೆ ಪತ್ತೆಯಾಗಿದ್ದರು. ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.  ಪೊಲೀಸರು ಆರೋಪಿಯನ್ನು ವಿಚಾರಿಸಿದಾಗ ತನ್ನೊಂದಿಗೆ ಆಕೆ ದೈಹಿಕ ಸಂಬಂಧ ಹೊಂದಲು ನಿರಾಕರಿಸಿದ್ದಾಳೆ, ಇದಕ್ಕಾಗಿ ಹತ್ಯೆ ಮಾಡಲಾಗಿದೆ ಸಿಕಂದರ್ ಪೊಲೀಸರಿಗೆ ತಿಳಿಸಿದ್ದ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group