ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ವಸಂತ ರೆಡ್ಡಿ ಹೇಳಿದ್ದಾರೆ. ಕಾರವಾರದಲ್ಲಿ ಕರ್ನಾಟಕ ಜೀವ ವೈವಿಧ್ಯ ಮಂಡಳಿ ಹಾಗೂ ಸಾಮಾಜಿಕ ಅರಣ್ಯ ವಿಭಾಗ, ಕಾರವಾರ ಇವರ ಸಹಯೋಗದಲ್ಲಿ ಆಯೋಜಿಸಿದ್ದ ಜೀವ ವೈವಿಧ್ಯತೆಯ ಸಂರಕ್ಷಣೆಯ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜೀವ ವೈವಿಧ್ಯತೆ ಸಂರಕ್ಷಣೆಗೆ ಸಾರ್ವಜನಿಕರು ಕೈಜೋಡಿಸಬೇಕು. ಪ್ರಪಂಚದಲ್ಲಿ 5 ಸಾವಿರ ಸಸ್ಯ ಪ್ರಭೇದಗಳಿದ್ದು, ಈ ಪೈಕಿ 1600 ಪ್ರಭೇದಗಳು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಲು ಸಿಗುತ್ತವೆ ಎಂದರು.
ಕಳೆದ 5 ವರ್ಷಗಳಲ್ಲಿ ತಮಿಳುನಾಡಿನಲ್ಲಿ ಅಡಿಕೆ ಕೃಷಿ ಶೇ. 50 ರಷ್ಟು ಹೆಚ್ಚಾಗಿದೆ.ಇದುವರೆಗೂ…
ಸರ್ಕಾರಿ ಆಯುರ್ವೇದ ಕಾಲೇಜು ಸ್ಥಾಪನೆಯಾದರೆ ಅಡಿಕೆಯ ವೈಜ್ಞಾನಿಕ ಸಂಶೋಧನೆಗೆ ಅನುಕೂಲವಾಗಬಹುದು. ಅಲ್ಲದೆ, ಸಾಂಪ್ರದಾಯಿಕ…
ರೈತರ ಹಿತದೃಷ್ಟಿಯಿಂದ ಬೆಂಬಲ ಬೆಲೆ ಖರೀದಿಯ ಕಾಲಮಿತಿ ಹೆಚ್ಚಿಸುವಂತೆ ಕೇಂದ್ರ ಕೃಷಿ ಸಚಿವರಲ್ಲಿ…
ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ, ಗಣಿಗಾರಿಕೆ, ಮನರಂಜನೆ ಯೋಜನೆಗಳಲ್ಲಿನ ಅಂತರ್ಜಲ ಬಳಕೆದಾರರು ಕಡ್ಡಾಯವಾಗಿ…
ಕನ್ನಡ ಭಾಷೆಯನ್ನು ಆಡಳಿತದಲ್ಲಿ ಜಾರಿಗೆ ತರದಿದ್ದರೆ, ಆದೇಶಗಳಿಂದ ಅನುಷ್ಠಾನ ಮಾಡಲು ಸಾಧ್ಯವಾಗುವುದಿಲ್ಲ ಎಂದು…
ರಾಮನು ಸೀತೆಯನ್ನು ಪರಿತ್ಯಜಿಸಿದ್ದು ಸರಿಯೆ? ಅರಣ್ಯದಲ್ಲಿ ಸೀತೆ ಏನಾದಳು? ಅವಳ ಮನಸ್ಸಿಗೆ ಎಂತಹ…