Advertisement
ಸುದ್ದಿಗಳು

ಶಾಲೆಗಳಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ : ಜಿಲ್ಲಾಧಿಕಾರಿ

Share

ಜಿಲ್ಲೆಯಾದ್ಯಂತ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕಾ ಅಭಿಯಾನ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಹೇಳಿದರು.

ಅವರು ನಗರದ ವೆನ್‍ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ಮಾನ್‌ ವಿಭಾಗದಲ್ಲಿ ಮಾ.16ರ ಬುಧವಾರ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಡೆದ ಕೋರ್ಬೇ ವ್ಯಾಕ್ಸ್ ಲಸಿಕೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವ ಮುನ್ನೆಚ್ಚರಿಕಾ ಲಸಿಕಾ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯದಾದ್ಯಂತ ಲಸಿಕೆಗಳು ಲಭ್ಯವಿದ್ದು, ಈಗಾಗಲೇ ಜನರು ಎಚ್ಚೆತ್ತುಕೊಂಡು ಲಸಿಕೆಗಳನ್ನು ಪಡೆದರೆ ಮುಂಬರುವ ಕೋವಿಡ್ ಸೋಂಕಿನ ಅಪಾಯಗಳಿಂದ ಪಾರಾಗಬಹುದು ಎಂದು ಕಿವಿ ಮಾತು ಹೇಳಿದರು.

ಜಿಲ್ಲೆಯಲ್ಲಿ ಈಗಾಗಲೇ ಮೊದಲನೇ ಡೋಸ್ 100 ಶೇಕಡಾ, ಎರಡನೇ ಡೋಸ್ 91 ಶೇಕಡಾ ಮತ್ತು 15ವರ್ಷ ಮೇಲ್ಪಟ್ಟವರಿಗೆ 85 ಶೇಕಡಾ ಲಸಿಕೆ ನೀಡಲಾಗಿದೆ. ಇದರೊಂದಿಗೆ ಸುಮಾರು 72 ಸಾವಿರ ಮಕ್ಕಳಿಗೆ ಕೋರ್ಬೇ ವ್ಯಾಕ್ಸ್ ಲಸಿಕೆ ನೀಡುವ ಸಲುವಾಗಿ ಶಾಲೆಗಳಲ್ಲೂ ಲಸಿಕಾ ಅಭಿಯಾನ ಆರಂಭಿಸಲಾಗುವುದು. ಜಿಲ್ಲೆಯಲ್ಲಿರುವ 60 ವರ್ಷ ಮೇಲ್ಪಟ್ಟವರನ್ನು ಗುರುತಿಸಿ ಮುನ್ನೆಚ್ಚರಿಕಾ ಲಸಿಕೆ ನೀಡುವ ಕೆಲಸಗಳಾಗುತ್ತಿದೆ ಎಂದು ಹೇಳಿದರು.

ವೈದ್ಯಕೀಯ ಸಿಬ್ಬಂದಿಗಳು ಕೂಡ ಕಡ್ಡಾಯವಾಗಿ ಮುನ್ನೆಚ್ಚರಿಕಾ ಲಸಿಕೆ ಪಡೆದುಕೊಳ್ಳಬೇಕು. ಲಸಿಕೆಯ ಬಗ್ಗೆ ಜನರಲ್ಲಿರುವ ತಪ್ಪು ಭಾವನೆಗಳನ್ನು ಹೋಗಲಾಡಿಸಿ ಜಿಲ್ಲೆಯಾದ್ಯಂತ ಎಲ್ಲಾ ವಯೋಮಾನದವರಿಗೂ ಶೇಕಡಾ 100ರಷ್ಟು ಲಸಿಕೆ ನೀಡಲು ಯಶಸ್ವಿಯಾಗಿ ಆರೋಗ್ಯ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಗಳು ಶ್ರಮಿಸುತ್ತಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಸರ್ಜನ್ ಡಾ. ಸದಾಶಿವ ಶಾನ್ ಬೋಗ್, ಜಿಲ್ಲಾ ಆರೋಗ್ಯ ಮತ್ತು ಶಿಕ್ಷಣಾಧಿಕಾರಿ ಜ್ಯೋತಿ ಕುಮಾರಿ, ಆರ್.ಸಿ.ಎಚ್. ಡಾ. ರಾಜೇಶ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ಸೇರಿದಂತೆ ಇತರೆ ವೈದ್ಯಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

4 hours ago

‘ರೋಸ್ಟೆಡ್ ಅಡಿಕೆ’ ಆಮದು ವರ್ಗೀಕರಣಕ್ಕೆ ಮತ್ತೊಂದು ತಿರುವು – ಹೈಕೋರ್ಟ್ ತೀರ್ಪು ಉಲ್ಲೇಖಿಸಿ ಅರ್ಜಿ ತಿರಸ್ಕರಿಸಿದ ಮುಂಬೈ ಪ್ರಾಧಿಕಾರ

‘ರೋಸ್ಟೆಡ್ ಅಡಿಕೆ’ಯನ್ನು ಯಾವ ಸುಂಕ ವರ್ಗದಡಿ ಪರಿಗಣಿಸಬೇಕು ಎಂಬ ವಿವಾದಕ್ಕೆ ಮುಂಬೈ CAAR…

13 hours ago

ಬರಕ್ಕೆ ರಾಗಿ ಕೂಡ ಸೋಲುತ್ತಿದೆ – ‘ಬರ ನಿರೋಧಕ’ ಎಂದರೆ ಮಳೆ ಇಲ್ಲದಿದ್ದರೂ ಬೆಳೆಯುತ್ತದೆ ಎಂದಲ್ಲ!

ಮಳೆ ಇಲ್ಲದಿದ್ದರೆ ರಾಗಿ ಸೇರಿದಂತೆ ಬರ ಸಹಿಷ್ಣು ಬೆಳೆಗಳೂ ಉಳಿಯುವುದಿಲ್ಲ ಎಂಬುದನ್ನು ಕರ್ನಾಟಕದ…

14 hours ago

₹2,000ಕ್ಕಿಂತ ಹೆಚ್ಚಿನ UPI ವಹಿವಾಟಿನ MDRಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ

₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…

21 hours ago

ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತಕ್ಕೆ ಎರಡು ಪದಕ: ಪುರುಷರಿಗೆ ಬೆಳ್ಳಿ, ಮಹಿಳೆಯರಿಗೆ ಕಂಚು – ಪ್ರಧಾನಿ ಮೋದಿ ಅಭಿನಂದನೆ

ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…

21 hours ago

ಮಳೆ ಬದಲಾಗಿದೆಯೇ? ಪ್ರಕೃತಿ ಬದಲಾಗಿದೆಯೇ? ಅಥವಾ ನಾವೇ ಬದಲಾಗಿದ್ದೇವೆಯೇ?

ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…

22 hours ago