ಜಮ್ಮು ಮತ್ತು ಕಾಶ್ಮೀರದಲ್ಲಿ ನಿರಂತರ ಮಳೆಯಾಗುತ್ತಿದ್ದು, ಪ್ರಸಿದ್ಧ ಶ್ರೀಮಾತಾ ವೈಷ್ಣೋದೇವಿ ದೇಗುಲದ ತೀರ್ಥಯಾತ್ರೆಯನ್ನು ಮುಂದೂಡಲಾಗಿದೆ. ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಈ ತೀರ್ಥಯಾತ್ರೆಯನ್ನು ಪುನರಾರಂಭಿಸಲು ನಿರ್ಧರಿಸಲಾಗಿತ್ತು. ಆದರೆ ರಿಯಾಸಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಈ ತೀರ್ಥಯಾತ್ರೆಯನ್ನು ಮುಂದಿನ ಆದೇಶದ ವರೆಗೆ ಮುಂದೂಡಲಾಗಿದೆ ಎಂದು ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯು ತನ್ನ ಅಧಿಕೃತ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದೆ. ಯಾತ್ರಾರ್ಥಿಗಳ ಸುರಕ್ಷತೆ ಹಾಗೂ ಭದ್ರತೆಯ ಕಾರಣದಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಭಾರೀ ಮಳೆಯ ಕಾರಣದಿಂದ ದೇಗುಲಕ್ಕೆ ಹೋಗುವ ಮಾರ್ಗಗಳಲ್ಲಿ ಬೃಹತ್ ಭೂಕುಸಿತ ಉಂಟಾಗಿದ್ದರಿಂದ ಕಳೆದ ತಿಂಗಳ 26 ರಂದು ಗುಹಾ ದೇಗುಲದ ಪವಿತ್ರ ತೀರ್ಥಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..

