ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವಠಾರದಲ್ಲಿ ಎ.9 ರಂದು ಭಾನುವಾರ ಪಾವಂಜೆ ಮೇಳದಿಂದ ಯಕ್ಷಗಾನ ಬಯಲಾಟ ನಡೆಯಲಿದೆ. ಈ ಸಂದರ್ಭ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ.
ಕಳೆದ ಎರಡು ವರ್ಷಗಳಿಂದ ಯಕ್ಷಗಾನ ಕಲಾಭಿಮಾನಿ ಮಿತ್ರರ ವತಿಯಿಂದ ಯಕ್ಷಗಾನ ಬಯಲಾಟ ನಡೆಸಲಾಗುತ್ತಿದೆ. ಕಲಾಸೇವೆ ಹಾಗೂ ಕಲಾವಿದರಿಗೆ ಪ್ರೋತ್ಸಾಹದ ಉದ್ದೇಶದಿಂದ ನಡೆಸಲಾಗುತ್ತಿರುವ ಯಕ್ಷಗಾನ ಬಯಲಾಟ ಕಾರ್ಯಕ್ರಮದಲ್ಲಿ ಈ ಬಾರಿ ಶ್ರೀಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮೇಳದ ವತಿಯಿಂದ ಶ್ರೀ ದೇವಿ ಲಲಿತೋಪಾಖ್ಯಾನ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ. ಇದೇ ಸಂದರ್ಭ ಕಲಾವಿದರಿಗೆ ಗೌರವಾರ್ಪಣೆ ಕೂಡಾ ನಡೆಯಲಿದೆ. ಈ ಬಾರಿ ಹಿರಿಯ ಕಲಾವಿದ ರೆಂಜಾಳ ರಾಮಕೃಷ್ಣ ರಾವ್ ಇವರಿಗೆ ಗೌರವಾರ್ಪಣೆ ನಡೆಯಲಿದೆ. ಪಾವಂಜೆ ಮೇಳದ ಸಂಚಾಲಕ, ಪ್ರಸಿದ್ಧ ಭಾಗವತ ಯಕ್ಷಧ್ರುವ ಸತೀಶ್ ಶೆಟ್ಟಿ ಪಟ್ಲ ಅವರು ಯಕ್ಷಗಾನ ಕಲಾಭಿಮಾನಿ ಮಿತ್ರರ ಪರವಾಗಿ ಗೌರವಾರ್ಪಣೆ ನಡೆಸಲಿದ್ದಾರೆ.
ರಾಮಕೃಷ್ಣ ರಾವ್ ಇವರು ಸುಳ್ಯ ತಾಲೂಕು ಮರ್ಕಂಜ ಗ್ರಾಮದ ರೆಂಜಾಳ ಎಂಬಲ್ಲಿ ದಿ.ವೆಂಕಟರಮಣಯ್ಯ ಹಾಗೂ ಯಮುನಮ್ಮ ದಂಪತಿ ಪ್ರಥಮ ಪುತ್ರರಾಗಿ ಜನಿಸಿದರು. ಪ್ರೌಢಶಾಲಾ ಶಿಕ್ಷಣದ ಬಳಿಕ ಹೆಸರಾಂತ ಕಲಾವಿದರಾದ ಕುದ್ಕಾಡಿ ವಿಶ್ವನಾಥ ರೈ ಗಳಲ್ಲಿ ಭರತನಾಟ್ಯದ ಪ್ರಾಥಮಿಕ ಶಿಕ್ಷಣವನ್ನು ಪಡೆದರು. ಯಕ್ಷಗಾನ ಆಟ-ಕೂಟಗಳ ವಾತಾವರಣದಿಂದ ಪ್ರಭಾವಿತರಾಗಿ ಯಕ್ಷಗಾನ ಕಲೆಯ ಸೆಳೆತಕ್ಕೆ ಒಳಗಾದರು. ಅಗರಿ ಶ್ರೀನಿವಾಸ ಭಾಗವತರ ಆಶೀರ್ವಾದದೊಂದಿಗೆ ಪ್ರಪ್ರಥಮವಾಗಿ ಕೂಡ್ಲು ಮೇಳದಲ್ಲಿ ಗೆಜ್ಜೆ ಕಟ್ಟಿ ವೃತ್ತಿ ರಂಗಕ್ಕೆ ಪಾದಾರ್ಪಣೆ ಮಾಡಿ ಬಳಿಕ ಹಂತ ಹಂತವಾಗಿ ಯಕ್ಷಗಾನ ನಾಟ್ಯ ಕಲೆಯಲ್ಲಿ ಪ್ರಭುತ್ವ ಸಾಧಿಸಿದರು.
ಅಂಚೆ ಇಲಾಖೆಯಿಂದ ಬೆಳೆಗಾರರಿಂದ ಗ್ರಾಹಕರು ನೇರ ಮಾವು ಮಾರಾಟ ಯಶಸ್ವೀ ಸೇವೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು : ಗುಜ್ಜೆ 1 ಕಪ್ ಬೇಯಿಸಿ…
ಜಮ್ಮು- ಕಾಶ್ಮೀರದ ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…
23.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಮಹಾರಾಷ್ಟ್ರದ ಅಹಲ್ಯಾನಗರದಿಂದ ಅಮೆರಿಕದ ನ್ಯೂಯಾರ್ಕ್ಗೆ 14 ಟನ್ಗಳಷ್ಟು ಭಾರತೀಯ ದಾಳಿಂಬೆಯನ್ನು ರಫ್ತು ಮಾಡಲಾಗಿದೆ.…