Advertisement
MIRROR FOCUS

ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |

Share

ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ಹನುಮಗಿರಿ ಮೇಳದಿಂದ “ಪಾರಿಜಾತ-ಅಕ್ಷಯಾಂಬರ-ಕುಶಲವ” ಯಕ್ಷಗಾನ ಬಯಲಾಟವು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಸಭಾಭವನದಲ್ಲಿ ಡಿ.31 ರಂದು ನಡೆಯಲಿದೆ. ಈ ಸಂದರ್ಭ ಹಿರಿಯ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ ನಡೆಯಲಿದೆ.…..ಮುಂದೆ ಓದಿ….

ಹಿರಿಯ ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರು ಬಂಟ್ವಾಳ ತಾಲೂಕಿನ ಸಂಗಬೆಟ್ಟು ಗ್ರಾಮದ  ಸಿದ್ಧಕಟ್ಟೆಯವರು. ಸಿದ್ಧಕಟ್ಟೆ ಸೈಂಟ್ ಮೆಟ್ರಿಕ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದಿದ ಬಳಿಕ  ರೆಂಜಾಳ ರಾಮಕೃಷ್ಣ ರಾವ್ , ಬಣ್ಣದ ಮಹಾಲಿಂಗ ಯಕ್ಷಗಾನ ಕಲಿತರು. ಬಳಿಕ ಇರಾ ಗೋಪಾಲಕೃಷ್ಣ ಭಾಗವತ, ಸುಣ್ಣಂಬಳ ವಿಶ್ವೇಶ್ವರ ಭಟ್, ಬೆಳ್ಳಾರೆ ಮಂಜುನಾಥ ಭಟ್ ಮತ್ತು ಹಿರಿಯ ಕಲಾವಿದರಿಂದ ಇನ್ನಷ್ಟು ಯಕ್ಷಗಾನದ ಕಲಿಕೆಯನ್ನು ಮಾಡಿದರು. ಈಗ ವಿದ್ಯಾರ್ಥಿಗಳಿಗೆ ಯಕ್ಷಗಾನದ ತರಬೇತಿಯನ್ನೂ ನೀಡುತ್ತಿದ್ದಾರೆ.

2 ವರ್ಷ ಕಟೀಲು 2ನೇ ಮೇಳದಲ್ಲಿ ನೇಪಥ್ಯ ಕಲಾವಿದನಾಗಿ ತಿರುಗಾಟ, ಕಟೀಲು 1ನೇ ಮೇಳದಲ್ಲಿ 8 ವರ್ಷಗಳ ಕಾಲ ಬಣ್ಣದ ವೇಷಧಾರಿಯಾಗಿ  ತಿರುಗಾಟ, ಆಮೇಲೆ 13 ವರ್ಷಗಳ ಕಾಲ ಧರ್ಮಸ್ಥಳ ಮೇಳದಲ್ಲಿ ಬಣ್ಣದ ವೇಷಧಾರಿಯಾಗಿ ತಿರುಗಾಟ. ನಂತರದ ಈ ಹದಿಮೂರು ವರ್ಷಗಳಲ್ಲಿ ಹೊಸನಗರ, ಎಡನೀರು ಮತ್ತು ಈಗ ಹನುಮಗಿರಿ ಮೇಳಗಳಲ್ಲಿ ಕಲಾವಿದರಾಗಿದ್ದಾರೆ. ಆಂಧ್ರಪ್ರದೇಶ, ತಮಿಳುನಾಡು, ದೆಹಲಿ, ಅಯೋಧ್ಯೆ, ಕಾಶಿ, ಕೋಲ್ಕತ್ತಾ, ಕೇರಳ, ಹರಿದ್ವಾರ ಮೊದಲಾದೆಡೆ ನಡೆದ ಪ್ರದರ್ಶನಗಳಲ್ಲಿ ಭಾಗವಹಿಸಿ ಕಲಾಸೇವೆ ಮಾಡಿದ್ದಾರೆ.

ಇದುವರೆಗೆ ಪೇಜಾವರ ಶ್ರೀಗಳ ಜನುಮದಿನದ ಶ್ರೀರಾಮ ವಿಠಲ ಪ್ರಶಸ್ತಿ, ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಪ್ರಶಸ್ತಿ, ಕೀಲಾರು ಗೋಪಾಲಕೃಷ್ಣಯ್ಯ ಪ್ರಶಸ್ತಿ, ಅರಸಂಕಲ ಪ್ರಶಸ್ತಿಗಳನ್ನು ಪಡೆದುದಲ್ಲದೆ ಹರೇಕಳ ಪಾವೂರು, ಬಿ. ಸಿ. ರೋಡಿನಲ್ಲಿ ಅಲ್ಲದೆ  ಇನ್ನೂ ಅನೇಕ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ.

ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರು ಕಳೆದ 4 ವರ್ಷಗಳಿಂದ ಯಕ್ಷಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದು ಸತತ ನಾಲ್ಕು ವರ್ಷಗಳಲ್ಲಿ ಕಲಾಸೇವೆಯ ಸಂದರ್ಭ ಕಲಾವಿದರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ. ಈ ಹಿಂದೆ  ಹಿರಿಯ ಕಲಾವಿದ  ದಿವಂಗತ ಸೂರ್ಯನಾರಾಯಣ ಪಂಜಾಜೆ, ಹಿಮ್ಮೇಳ ವಾದಕರಾದ ಕುಮಾರ ಸುಬ್ರಹ್ಮಣ್ಯ ವಳಕುಂಜ, ಹಿರಿಯ ವೇಷದಾರಿಗಳಾದ ರೆಂಜಾಳ ರಾಮಕೃಷ್ಣ ರಾವ್ ಹಾಗು ಉಬರಡ್ಕ ಉಮೇಶ ಶೆಟ್ಟಿ ಇವರನ್ನು ಗೌರವಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

14 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

3 days ago