ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆ – ಹೂ, ಹಣ್ಣುಗಳ   ಖರೀದಿ – ಭರದಿಂದ ಸಾಗಿರುವ ಸಿದ್ಧತೆ ಕಾರ್ಯಗಳು

August 7, 2025
11:16 PM

ಶ್ರಾವಣ ಮಾಸದ ಪ್ರಮುಖ ಹಬ್ಬಗಳಲ್ಲಿ ಒಂದಾದ ವರಮಹಾಲಕ್ಷ್ಮಿ ಹಬ್ಬ ನಾಳೆ ನಡೆಯಲಿದ್ದು, ರಾಜ್ಯಾದ್ಯಂತ ಹಬ್ಬದ ಸಿದ್ದತೆಗಳು ಭರದಿಂದ ನಡೆಯುತ್ತಿವೆ. ಮಾರುಕಟ್ಟೆಗಳಲ್ಲಿ ಜನರು ಹೂವು, ಹಣ್ಣು, ಪೂಜಾ ಸಾಮಗ್ರಿಗಳನ್ನು ಖರೀದಿಸುತ್ತಿದ್ದಾರೆ. ಹೂವು ಹಾಗೂ ಬಾಳೆ ಹಣ್ಣು, ತೆಂಗಿನ ಕಾಯಿಗಳ ಬೆಲೆ ಹಿಂದೆಂದಿಗಿಂತಲೂ ಹೆಚ್ಚಾಗಿದ್ದು, ಮಾರುಕಟ್ಟೆಗಳಲ್ಲಿ ಜನಸಂದಣಿ ಹೆಚ್ಚಾಗಿದೆ.

ಚಿಕ್ಕಬಳ್ಳಾಪುರದ ಬಜಾರ್ ರಸ್ತೆ ಮತ್ತು ಶಿಡ್ಲಘಟ್ಟ ವೃತ್ತದಲ್ಲಿ ದುಬಾರಿ ಬೆಲೆಗಳ ನಡುವೆಯೂ ಹೂವು, ಹಣ್ಣು, ಬಾಳೆದಿಂಡು, ಮಾವಿನ ಎಲೆ ಮತ್ತು ಸಿಹಿತಿಂಡಿಗಳ ಖರೀದಿ ಭರಾಟೆಯಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ಅತ್ಯಂತ ಉತ್ಸಾಹ ಮತ್ತು ಸಂಭ್ರಮ ಸಡಗರಗಳಿಂದ ತೊಡಗಿದ್ದ ದೃಶ್ಯಗಳು ಕಂಡುಬಂತು.

ವಾಣಿಜ್ಯ ನಗರಿ ದಾವಣಗೆರೆ ಜಿಲ್ಲಾದ್ಯಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಕಳೆಗಟ್ಟಿದ್ದು, ಪೂಜೆಗಾಗಿ ಅಗತ್ಯ ಸಾಮಾಗ್ರಿಗಳನ್ನು ಮಹಿಳೆಯರು  ಖರೀದಿಸಿದರು. ಬೆಂಗಳೂರು ನಗರದ ಕೆ.ಆರ್.ಮಾರುಕಟ್ಟೆ, ಹೂವಿನ ಮಾರುಕಟ್ಟೆ ಸೇರಿದಂತೆ ಅನೇಕ ಸ್ಥಳಗಳಲ್ಲಿ ಹಣ್ಣು, ತರಕಾರಿ, ಪೂಜಾ ಸಾಮಾಗ್ರಿಗಳನ್ನು ಖರೀದಿಸಿದರು. ಹಬ್ಬದ ಹಿನ್ನೆಲೆಯಲ್ಲಿ ಎಲ್ಲ ಪೂಜಾ ಸಾಮಾಗ್ರಿಗಳ ದರ ಹೆಚ್ಚಳವಾಗಿರುವುದು ಕಂಡು ಬಂತು.

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ನಗರ ಮೈಸೂರಿನಲ್ಲಿಂದು ಖರೀದಿ ಭರಟೆ ಜೋರಾಗಿತ್ತು. ನಗರದ ಚಿಕ್ಕ ಗಡಿಯಾರ ವೃತ್ತ, ದೇವರಾಜ ಮಾರುಕಟ್ಟೆ, ಸಯ್ಯಾಜಿ ರಾವ್ ರಸ್ತೆ ಇತ್ಯಾದಿಯೆಡೆ ಗ್ರಾಹಕರು ಮುಗಿಬಿದ್ದು ಹೂವು, ಹಣ್ಣು, ಅಲಂಕಾರಿಕ ಹಾಗೂ ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿದರು. ಕೆಲವರು ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು ನೀಡುವ ಸಲುವಾಗಿ ಕಮಲದ ಹೂವಿನ ಜತೆಗೆ ತರಹೇವಾರಿ ಹೂಗಳನ್ನು ಖರೀದಿಸಿದರೆ ಮತ್ತೆ ಕೆಲವರು ಸಿಹಿ ಪದಾರ್ಥಗಳ ಖರೀದಿಯಲ್ಲಿ ತೊಡಗಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ತೋಟಗಳಿಗೆ ಸವಾಲಾಗಿರುವ ಎಲೆಚುಕ್ಕಿ ರೋಗ – ವಿಜ್ಞಾನ ಏನು ಹೇಳುತ್ತದೆ?
January 9, 2026
7:43 AM
by: ಮಹೇಶ್ ಪುಚ್ಚಪ್ಪಾಡಿ
ಕಿಸಾನ್ ಪಾಠಶಾಲೆ ಮೂಲಕ 20 ಲಕ್ಷ ರೈತರಿಗೆ ಆಧುನಿಕ ಕೃಷಿ ತರಬೇತಿ
January 8, 2026
10:40 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕ ಕಾಯ್ದೆಯಲ್ಲಿ ಮಹತ್ವದ ಬದಲಾವಣೆ | ಕೇಂದ್ರ ಸರ್ಕಾರದಿಂದ ಹೊಸ ಕರಡು ಮಸೂದೆ
January 8, 2026
10:34 PM
by: ದ ರೂರಲ್ ಮಿರರ್.ಕಾಂ
ಕುರಿ ಸಾಕಾಣಿಕ ಘಟಕ ಸ್ಥಾಪನೆಗೆ ಸಹಾಯಧನ
January 8, 2026
9:25 PM
by: ರೂರಲ್‌ ಮಿರರ್ ಸುದ್ದಿಜಾಲ

You cannot copy content of this page - Copyright -The Rural Mirror