2022ನೇ ಸಾಲಿನಲ್ಲಿ ಕೇಂದ್ರ ಸರಕಾರದ ಲೋಕ ಸೇವಾ ಆಯೋಗ ನಡೆಸಿದ ಎನ್.ಡಿ.ಎ. (ನ್ಯಾಷನಲ್ ಡಿಫೆನ್ಸ್ ಅಕಾಡಮಿ) ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿ ತಿಯಾನಂದ್ ಎಂ ಉತ್ತೀರ್ಣರಾಗಿ, ಮುಂದಿನ ಹಂತವಾದ ದೈಹಿಕ ಪರೀಕ್ಷೆಯಲ್ಲೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ, ಸರ್ವಿಸ್ ಸೆಲೆಕ್ಷನ್ ಬೋರ್ಡ್ (SSಃ) ನಡೆಸುವ ಮೌಖಿಕ ಸಂದರ್ಶನಕ್ಕೆ ಆಯ್ಕೆಯಾಗಿದ್ದಾರೆ. ಇವರು ಚಿನ್ನಾಲಪಟ್ಟಿಯ ಪಿ. ಮುರುಗನ್ ಮತ್ತು ರೇಣುಕಾ ಎಂ ದಂಪತಿಗಳ ಪುತ್ರ. ರಾಷ್ಟ್ರಮಟ್ಟದಲ್ಲಿ ಈ ಸಂದರ್ಶನಕ್ಕೆ ಆಯ್ಕೆಯಾಗುವ ಕೇವಲ 900 ವಿದ್ಯಾರ್ಥಿಗಳಲ್ಲಿ ಇವರೊಬ್ಬರಾಗಿರುವುದು ಗಮನಾರ್ಹ ಅಂಶ.
ತಿಯಾನಂದ್ ಎಂ.ರವರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಎನ್.ಸಿ.ಸಿ. ವಿದ್ಯಾರ್ಥಿಯಾಗಿದ್ದು, ಕಾಲೇಜಿನ ಕೋಚಿಂಗ್ ಸೆಲ್ ನಡೆಸುವ ತರಗತಿಗಳಲ್ಲಿ ತರಬೇತಿ ಪಡೆದಿದ್ದರು. ಈ ಪರೀಕ್ಷೆಯ ಪ್ರಶ್ನೆ ಪತ್ರಿಕೆಯು ಸಾಮಾನ್ಯ ಅರ್ಹತಾ ಪ್ರಶ್ನೆಗಳು ಮತ್ತು ಗಣಿತಶಾಸ್ತ್ರ ಪ್ರಶ್ನೆಗಳನ್ನು ಒಳಗೊಂಡಿತ್ತು.
ವಿದ್ಯಾರ್ಥಿಯ ಈ ವಿಶೇಷ ಸಾಧನೆಗಾಗಿ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದಿಸಿದ್ದಾರೆ.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…