ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಿಗಾಗಿ ಯೋಗಾಸನ ತರಬೇತಿ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದಯೋಗ ಶಿಕ್ಷಕ ಚಂದ್ರಶೇಖರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿ ಯೋಗ ಎಂಬುದು ನಮ್ಮ ಜ್ಞಾನದ ಅಭಿವೃದ್ಧಿಗೆ ಪೂರಕಾವಾದ ಕ್ರಿಯೆ. ಯೋಗದಿಂದ ಏಕಾಗ್ರತೆ ಹೆಚ್ಚುವುದಲ್ಲದೆ ನಮ್ಮ ಮಾನಸಿಕ ಮತ್ತು ದೈಹಿಕ ಕ್ಷಮತೆ ಅಭಿವೃದ್ಧಿಯಾಗುತ್ತದೆ. ದೇಹದಲ್ಲಿರುವ ಸ್ನಾಯುಗಳು ಬಲವರ್ಧನೆಯಾಗಲು ಯೋಗ ಸಹಕಾರಿ. ಚಂಚಲ ಮನಸ್ಸನ್ನು ಪ್ರಯತ್ನಪೂರ್ವಕವಾಗಿ ಒಂದೆಡೆಗೆ ತರಲು ಯೋಗವನ್ನು ಪ್ರತಿಯೊಬ್ಬರು ದಿನಂಪ್ರತಿ ಮಾಡಬೇಕು.ಇದರಿಂದ ಏಕಾಗ್ರತೆ ಬರುವುದರೊಂದಿಗೆ ಮನಸ್ಸನ್ನು ತಿಳಿಯಾಗಿರಿಸಲು ಸಾಧ್ಯ. ಪರಿಪೂರ್ಣ ಜೀವನಕ್ಕೆ ಯೋಗ ಅತ್ಯಗತ್ಯ. ಯೋಗ ಸಂಸ್ಕೃತಿಯನ್ನು ಜಾಗೃತ ಪಡಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ನಂತರ ಉಪನ್ಯಾಸಕರಿಗೆ ವಿವಿಧ ಆಸನಗಳನ್ನು ಪ್ರದರ್ಶಿಸಿ ಅವುಗಳ ಪ್ರಾಮುಖ್ಯತೆಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಸಂಸ್ಕೃತ ವಿಭಾಗದ ಉಪನ್ಯಾಸಕ ಜಯಗೋವಿಂದ ಶರ್ಮಾ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು ಮೂರು ದಿನ ಕಾಲೇಜಿನ ಸಭಾಂಗಣದಲ್ಲಿ ಯೋಗಾಭ್ಯಾಸ ಕಾರ್ಯಕ್ರಮವು ನಡೆಯಲಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…