Advertisement
ಸುದ್ದಿಗಳು

ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್‌ನಲ್ಲಿ ಸಂವಿಧಾನ ದಿನಾಚರಣೆ

Share

ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆ ವಿವೇಕಾನಂದ ಅಧ್ಯಯನ ಕೇಂದ್ರ ಯಶಸ್ ನ ವತಿಯಿಂದ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಯಶಸ್ ಅಧ್ಯಯನ ಕೇಂದ್ರದಲ್ಲಿ ಶುಕ್ರವಾರ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಬಿಇಎಲ್‌ನ ನಿವೃತ್ತ ಸೀನಿಯರ್ ಡೆಪ್ಯುಟಿ ಜೆನರಲ್ ಮ್ಯಾನೇಜರ್ ಹಾಗೂ ಕರ್ನಾಟಕ ಬಾರ್ ಕೌನ್ಸಿಲ್‌ನ ವಕೀಲ ಟಿ.ಎನ್.ಸಿ ಲಕ್ಷ್ಮೀನರಸಿಂಹನ್ ಸಂವಿಧಾನದ ಅರ್ಥ, ರಚನೆ ಹಾಗೂ ಅದರ ಅನಿವಾರ್ಯತೆಯ ಕುರಿತು ತಿಳಿಸಿದರು. ಜೊತೆಗೆ ರಾಜ್ಯಪಟ್ಟಿ ರಾಷ್ಟ್ರಪಟ್ಟಿ ಹಾಗೂ ಸಮವರ್ತಿ ಪಟ್ಟಿಗಳ ನಡುವಿನ ವ್ಯತ್ಯಾಸ ಮತ್ತು ಪ್ರಜೆಗಳು, ಸರ್ಕಾರ ಹಾಗೂ ಧರ್ಮದ ನಡುವಿನ ಸಾಮ್ಯತೆಯನ್ನು ವಿವರಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಯಶಸ್ ವಿದ್ಯಾರ್ಥಿಗಳೊಂದಿಗೆ ಸಂವಾದ ನೆಡೆಸಿದರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಎಂಬಿಎ ವಿಭಾಗದ ಮುಖ್ಯಸ್ಥ ಶೇಖರ್ ಐಯ್ಯರ್, ಯಶಸ್ ಸಂಯೋಜಕ ಗೋವಿಂದರಾಜ ಶರ್ಮ, ವಿವೇಕಾನಂದ ಪದವಿ ಕಾಲೇಜಿನ ಜೀವಶಾಸ್ತ್ರ ವಿಭಾಗ ಮುಖ್ಯಸ್ಥ ಈಶ್ವರ ಪ್ರಸಾದ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಸುಧೀರ್ ಹಾಗೂ ಯಶಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಯಶಸ್ ವಿದ್ಯಾರ್ಥಿಗಳಾದ ಸಾಯಿಕೃಪಾ ಮತ್ತು ಅಶ್ವಿನಿ ಪ್ರಾರ್ಥಿಸಿ, ವಾಸುದೇವ ತಿಲಕ್ ಸ್ವಾಗತಿಸಿದರು. ಯಶಸ್ ವಿದ್ಯಾರ್ಥಿನಿ ಈಶ್ವರಿ ಕಾರ್ಯಕ್ರಮವನ್ನು ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 hour ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 hour ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 hour ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 hour ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

17 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

21 hours ago