ರಾಷ್ಟ್ರಮಟ್ಟಕ್ಕೆ ಸೇವಾಕಾರ್ಯ ವಿಸ್ತರಣೆ – ಡಾ.ಡಿ.ವೀರೇಂದ್ರ ಹೆಗ್ಗಡೆ

July 9, 2022
9:20 PM

ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

Advertisement
Advertisement
Advertisement
Advertisement

ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿಅವರನ್ನು ಧರ್ಮಸ್ಥಳಕ್ಕೆ ಸ್ವಾಗತಿಸಲಾಯಿತು.

Advertisement

ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದರು. ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ತನಗೆ ಈ ಅವಕಾಶ ನೀಡಿದ್ದಾರೆ.ತಕ್ಷಣ ನಾನು ಅದನ್ನು ಸ್ವೀಕರಿಸಿದೆ ಎಂದು ಹೇಳಿದರು.

ಹೆಗ್ಗಡೆಯವರ ನಿವಾಸ  ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಹಾಗೂ ಕುಟುಂಬದವರು, ಸಿಬ್ಬಂದಿ ಮತ್ತು ಅಭಿಮಾನಿಗಳು ಭಕ್ತಿಪೂರ್ವಕ ಸ್ವಾಗತಿಸಿದರು.ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ
February 25, 2025
7:20 AM
by: ದ ರೂರಲ್ ಮಿರರ್.ಕಾಂ
ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ
February 25, 2025
7:10 AM
by: The Rural Mirror ಸುದ್ದಿಜಾಲ
ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು
February 25, 2025
7:05 AM
by: The Rural Mirror ಸುದ್ದಿಜಾಲ
ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |
February 24, 2025
10:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror