ಪ್ರಸ್ತುತ ರಾಜ್ಯದಲ್ಲಿರುವ ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ರಾಷ್ಟ್ರಮಟ್ಟದಲ್ಲಿ ವಿಸ್ತರಿಸಲಾಗುವುದು. ತನ್ನಆಯುಷ್ಯದ ಪ್ರತಿಕ್ಷಣವನ್ನೂ ದೇಶ ಸೇವೆಗಾಗಿ ವಿನಿಯೋಗಿಸುತ್ತೇನೆ. ಎಲ್ಲರೂ ದೇಶದ ಪ್ರಗತಿಗಾಗಿ ಪ್ರಾರ್ಥಿಸಿ, ಶ್ರಮಿಸೋಣ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಬಳಿಕ ಪ್ರಥಮವಾಗಿ ಶನಿವಾರ ಧರ್ಮಸ್ಥಳಕ್ಕೆ ಬಂದ ಅವರನ್ನು ಚಾರ್ಮಾಡಿಯಲ್ಲಿ ತಾಲೂಕಿನ ಜನತೆಯ ಪರವಾಗಿ ಶಾಸಕ ಹರೀಶ್ ಪೂಂಜ ಸ್ವಾಗತ ಕೋರಿದರು. ಬಳಿಕ ವಾಹನ ಜಾಥಾದಲ್ಲಿ ಭವ್ಯ ಮೆರವಣಿಗೆಯಲ್ಲಿಅವರನ್ನು ಧರ್ಮಸ್ಥಳಕ್ಕೆ ಸ್ವಾಗತಿಸಲಾಯಿತು.
ಬಳಿಕ ಮಾತನಾಡಿದ ಅವರು, ರಾಜ್ಯಸಭೆ ಅಂದರೆ “ಹಿರಿಯರ ಸಭೆ”. ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಅನುಗ್ರಹದಿಂದ ತನಗೆ ರಾಷ್ಟ್ರಮಟ್ಟದಲ್ಲಿ ಪಕ್ಷಾತೀತವಾಗಿ ಸೇವೆ ಮಾಡುವ ಸುವರ್ಣಾವಕಾಶ ದೊರಕಿದೆ. ಇದು ಧರ್ಮಸ್ಥಳಕ್ಕೆ, ತನಗೆ, ಹಾಗೂ ತಮ್ಮ ಪೂರ್ವಜರಿಗೆ ಸಂದ ಗೌರವವಾಗಿದೆ ಎಂದರು. ಪ್ರಧಾನಿ ಮೋದಿಯವರು ಧರ್ಮಸ್ಥಳದ ಎಲ್ಲಾ ಸೇವಾ ಕಾರ್ಯಗಳನ್ನು ಸೂಕ್ಷ್ಮವಾಗಿ ಗಮನಿಸಿ ದೂರವಾಣಿ ಮೂಲಕ ಮಾತನಾಡಿ ತನಗೆ ಈ ಅವಕಾಶ ನೀಡಿದ್ದಾರೆ.ತಕ್ಷಣ ನಾನು ಅದನ್ನು ಸ್ವೀಕರಿಸಿದೆ ಎಂದು ಹೇಳಿದರು.
ಹೆಗ್ಗಡೆಯವರ ನಿವಾಸ ಹೇಮಾವತಿ ವೀ. ಹೆಗ್ಗಡೆಯವರು ಮತ್ತು ಡಿ. ಹರ್ಷೇಂದ್ರಕುಮಾರ್ ಹಾಗೂ ಕುಟುಂಬದವರು, ಸಿಬ್ಬಂದಿ ಮತ್ತು ಅಭಿಮಾನಿಗಳು ಭಕ್ತಿಪೂರ್ವಕ ಸ್ವಾಗತಿಸಿದರು.ಕಿಯೊನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…