ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರನ್ನು ಭೇಟಿ ಮಾಡಿ ಮಕ್ಕಳು ಬೆಳೆಸಿದ ತರಕಾರಿಯನ್ನು ನೀಡಿದರು. ಮಕ್ಕಳೊಂದಿಗೆ ಕೆಲ ಕಾಲ ಸಂವಾದ ನಡೆಸಿದ ಜಿಲ್ಲಾಧಿಕಾರಿಗಳು ಶಾಲೆಯಲ್ಲಿ ಮಕ್ಕಳು ನಡೆಸುವ ಕೃಷಿ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶೀಘ್ರವೇ ಶಾಲೆಗೂ ಭೇಟಿ ನೀಡುವುದಾಗಿ ತಿಳಿಸಿದರು.
ಈ ವೇಳೆ ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್, ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ಎ. ಎನ್, ಹಳೆ ವಿದ್ಯಾರ್ಥಿ ಸಂಘದ ಶಿವರಾಜ್, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರನ್ನು ಭೇಟಿ ಮಾಡಿ ಅವರಿಗೂ ವಿದ್ಯಾರ್ಥಿಗಳು ತರಕಾರಿ ನೀಡಿದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…