ಕರಾವಳಿ ಕರ್ನಾಟಕದಲ್ಲಿ ಜು.7 ಹಾಗೂ 8 ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಎರಡೂ ದಿನಗಳ ಕಾಲ ಆರೆಂಜ್ ಎಲರ್ಟ್ ಸೂಚನೆ ನೀಡಿದೆ.
ಜು.7 ಹಾಗೂ 9 ಹಾಗೂ 10 ರಂದು ರಂದು ಗುಜರಾತ್ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರ್ನಾಟಕ ಮತ್ತು ಕೇರಳ ಹಾಗೂ ಮಾಹೆಯಲ್ಲಿ ಕೂಡಾ ಭಾರೀ ಮಳೆ ಸಾಧ್ಯತೆ ಘೋಷಿಸಿದೆ. ಜುಲೈ 07 ಮತ್ತು 08 ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಎಲರ್ಟ್ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾದ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಕಲಬುರ್ಗಿ, ಗದಗದಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.
ಕರ್ನಾಟಕದ ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿಯುದ್ದಕ್ಕೂ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 40-50 ಕಿ.ಮೀ. ಇರಲಿದ್ದು 60ರ ವರಗೆ ತಲುಪುವ ಸಾಧ್ಯತೆಯಿದೆ, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.