Advertisement
ಸುದ್ದಿಗಳು

ಮಳೆ ಮಾಹಿತಿ | ಇನ್ನೂ ಎರಡು ದಿನ ಭಾರೀ ಮಳೆಯ ಸೂಚನೆ ನೀಡಿದ ಹವಾಮಾನ ಇಲಾಖೆ |

Share

ಕರಾವಳಿ ಕರ್ನಾಟಕದಲ್ಲಿ  ಜು.7 ಹಾಗೂ 8 ರಂದು ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಎರಡೂ ದಿನಗಳ ಕಾಲ ಆರೆಂಜ್‌ ಎಲರ್ಟ್‌ ಸೂಚನೆ ನೀಡಿದೆ.

ಜು.7 ಹಾಗೂ 9 ಹಾಗೂ 10 ರಂದು  ರಂದು ಗುಜರಾತ್ ಪ್ರದೇಶದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಕರ್ನಾಟಕ ಮತ್ತು ಕೇರಳ ಹಾಗೂ ಮಾಹೆಯಲ್ಲಿ ಕೂಡಾ ಭಾರೀ ಮಳೆ ಸಾಧ್ಯತೆ ಘೋಷಿಸಿದೆ. ಜುಲೈ 07 ಮತ್ತು 08 ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್‌ ಎಲರ್ಟ್‌ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾದ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕೊಡಗು, ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಭಾರಿಯಿಂದ ಅತಿ ಭಾರಿ ಮಳೆಯಾಗುವ ಸಾದ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ, ಕಲಬುರ್ಗಿ, ಗದಗದಲ್ಲಿ ಮತ್ತು ದಕ್ಷಿಣ ಒಳನಾಡಿನ ಹಾಸನ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾದ್ಯತೆ ಇದೆ.

 ಕರ್ನಾಟಕದ ಕರಾವಳಿಯ ಮಂಗಳೂರಿನಿಂದ ಕಾರವಾರದವರೆಗಿನ ಕರಾವಳಿಯುದ್ದಕ್ಕೂ ಬಿರುಗಾಳಿಯ ವೇಗವು ಪ್ರತಿ ಘಂಟೆಗೆ 40-50 ಕಿ.ಮೀ. ಇರಲಿದ್ದು 60ರ ವರಗೆ ತಲುಪುವ ಸಾಧ್ಯತೆಯಿದೆ, ಮೀನುಗಾರರು ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

4 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

19 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago