ಕನ್ನಡದ ಹಿರಿಯ ನಟರಾದ ದ್ವಾರಕೀಶ್ ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ(Actor). ಚಿತ್ರರಸಿಕರನ್ನು ತಮ್ಮ ಕುಳ್ಳಗಿನ ದೇಹದ ಮೂಲಕ ರಂಜಿಸಿದ್ದಾರೆ. ಹಲವಾರು ಚಿತ್ರಗಳಲ್ಲಿ ನಟಿಸಿದ್ದಲ್ಲದೆ, ನಿರ್ದೇಶನ(Director), ಚಿತ್ರ ನಿರ್ಮಾಣವನ್ನು ಮಾಡಿ ಸೈ ಎನಿಸಿಕೊಂಡಿದ್ದವರು ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh). ಅವರು ಇಂದು ನಮ್ಮನ್ನೆಲ್ಲಾ ಅಗಲಿದ್ದಾರೆ. ನಿಧನರಾಗಿದ್ದಾರೆ.
81 ರ ವಯಸ್ಸಿನ ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.ಹಿರಿಯ ನಟ ದ್ವಾರಕೀಶ್ (Dwarkish) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ (Death). ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ. ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್, ಡಾ.ವಿಷ್ಣುವರ್ಧನ್, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ.
ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ.