Advertisement
MIRROR FOCUS

ಹಿರಿಯ ನಟ ದ್ವಾರಕೀಶ್ ನಿಧನ | ಕಂಬನಿ ಮಿಡಿದ ಚಿತ್ರರಂಗ ಹಾಗೂ ನಾಡಿನ ಗಣ್ಯರು

Share

ಕನ್ನಡದ ಹಿರಿಯ ನಟರಾದ  ದ್ವಾರಕೀಶ್‌ ಕನ್ನಡ ಚಿತ್ರರಂಗ ಕಂಡ ಅದ್ಭುತ ನಟ(Actor). ಚಿತ್ರರಸಿಕರನ್ನು ತಮ್ಮ ಕುಳ್ಳಗಿನ ದೇಹದ ಮೂಲಕ ರಂಜಿಸಿದ್ದಾರೆ. ಹಲವಾರು ಚಿತ್ರಗಳಲ್ಲಿ ನಟಿಸಿದ್ದಲ್ಲದೆ, ನಿರ್ದೇಶನ(Director), ಚಿತ್ರ ನಿರ್ಮಾಣವನ್ನು ಮಾಡಿ ಸೈ ಎನಿಸಿಕೊಂಡಿದ್ದವರು ಕನ್ನಡದ ಕುಳ್ಳ, ಹಿರಿಯ ನಟ ದ್ವಾರಕೀಶ್ (Dwarkeesh). ಅವರು ಇಂದು ನಮ್ಮನ್ನೆಲ್ಲಾ ಅಗಲಿದ್ದಾರೆ.  ನಿಧನರಾಗಿದ್ದಾರೆ.

81 ರ ವಯಸ್ಸಿನ  ನಟ, ವಯೋಸಹಜ (Passed away) ಕಾಯಿಲೆಯಿಂದ ಬಳಲುತ್ತಿದ್ದರು. ನಟರಾಗಿ, ನಿರ್ಮಾಪಕರಾಗಿ ಹಲವಾರು ದಶಕಗಳ ಕಾಲ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದರು.ಹಿರಿಯ ನಟ ದ್ವಾರಕೀಶ್ (Dwarkish) ಇಂದು ಬೆಳಗ್ಗೆ ಸ್ವಗೃಹದಲ್ಲಿ ನಿಧನರಾಗಿದ್ದಾರೆ (Death). ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದ್ವಾರಕೀಶ್ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಇಂದು ಬೆಳಗ್ಗೆ ಎಂದಿನಂತೆ ಎದ್ದು, ಕಾಫಿ ಕುಡಿದವರು ನಂತರ ಉಸಿರು ಚೆಲ್ಲಿದ್ದಾರೆ. ಅಗಲಿದ ಹಿರಿಯ ನಟನಿಗೆ ವಿವಿಧ ಕ್ಷೇತ್ರದ ಗಣ್ಯರು ಕಂಬನಿ ಮಿಡಿದಿದ್ದಾರೆ.  ಇಂದು ಬೆಳಗ್ಗೆ ದ್ವಾರಕೀಶ್ ನಿಧನರಾಗಿರುವ ಸುದ್ದಿಯನ್ನು ಅವರ ಪುತ್ರ ಯೋಗೀಶ್ ಅವರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಅವರ ಅಗಲಿಕೆ ನನಗೆ ಬಹಳ ನೋವುಂಟು ಮಾಡಿದೆ. ಕಲಾವಿದರಾಗಿ ಅಷ್ಟೇ ಅಲ್ಲದೆ; ನಿರ್ಮಾಪಕರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಅವರು ಸಲ್ಲಿಸಿರುವ ಅನುಪಮ ಸೇವೆ ಆವಿಸ್ಮರಣೀಯ.ವರನಟ ಡಾ.ರಾಜ್‌ಕುಮಾರ್‌, ಡಾ.ವಿಷ್ಣುವರ್ಧನ್‌, ಶ್ರೀ ಅಂಬರೀಶ್‌ರಂಥ ದಿಗ್ಗಜರ ಜತೆ ನಟಿಸಿದ್ದ ಅವರು, ತಮ್ಮ ಬಹುಮುಖ ಪ್ರತಿಭೆಯಿಂದ ಕನ್ನಡ ಸಿನಿಮಾ ಅಸ್ತಿಯಾಗಿದ್ದರು. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ, ಅಭಿಮಾನಿಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬನಿ ಮಿಡಿದ್ದಾರೆ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ.

ಕನ್ನಡ ಚಿತ್ರರಂಗದ ಮೇರು ನಟ, ನಿರ್ದೇಶಕ ಹಾಗೂ ಹಿರಿಯ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾಗಿರುವ ವಿಷಯ ತಿಳಿದು ತುಂಬಾ ದಃಖಿತನಾಗಿದ್ದೇನೆ‌. ಅವರ ಅಗಲಿಕೆಯಿಂದ ಕನ್ನಡ ಕಲಾಕ್ಷೇತ್ರ ಬಡವಾದಂತಾಗಿದೆ. ದ್ವಾರಕೀಶ್ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ‌ನು ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಕಂಬಿನಿ ಮಿಡಿದಿದ್ದಾರೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ.

ಕನ್ನಡ ಚಿತ್ರರಂಗ ಕಂಡ ಖ್ಯಾತ ಕಲಾವಿದ, ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಶ್ರೀ ದ್ವಾರಕೀಶ್ ವಿಧಿವಶರಾದ ಸುದ್ದಿ ಅತ್ಯಂತ ಆಘಾತ ಉಂಟುಮಾಡಿದೆ. ನಾಡಿನ ದಿಗ್ಗಜ ಕಲಾವಿದರೊಂದಿಗೆ ನಟಿಸಿ, ಅವರ ಸಿನಿಮಾಗಳನ್ನು ನಿರ್ಮಿಸಿದ್ದ ದ್ವಾರಕೀಶ್ ಅವರ ನಿಧನದಿಂದ ಚಿತ್ರರಂಗ ಒಬ್ಬ ಸಾಧಕ ಕಲಾವಿದನನ್ನು ಕಳೆದುಕೊಂಡಿದೆ. ಅಗಲಿದ ಆ ಹಿರಿಯ ಕಲಾಚೇತನಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ, ಆಪ್ತೇಷ್ಟರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ದಯಪಾಲಿಸಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ನೆನೆದಿದ್ದಾರೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ದಾಖಲೆ ಉದ್ಯೋಗ ಸೃಷ್ಟಿ – 2.04 ಕೋಟಿ ಮಾನವ ದಿನಗಳ ಕೆಲಸ

ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…

10 hours ago

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

1 day ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

2 days ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

2 days ago