ವಿದ್ಯಾಮಾತಾ ಪೌಂಡೇಶನ್ ವತಿಯಿಂದ ರಾಜ್ಯಮಟ್ಟದ ಉದ್ಯೋಗ ಮೇಳ | 2 ಸಾವಿರಕ್ಕೂ ಹೆಚ್ಚಿನ ನೋಂದಣಿ |

November 24, 2022
9:30 PM

ವಿದ್ಯಾಮಾತಾ ಫೌಂಡೇಶನ್ ವತಿಯಿಂದ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾವಣೆಯನ್ನು ಕಳೆದ 10 ದಿನಗಳ ಹಿಂದೆ ಪ್ರಾರಂಭಿಸಲಾಗಿದ್ದು 2 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಈಗಾಗಲೇ ನೋಂದಾವಣೆಯನ್ನು ಮಾಡಿದ್ದಾರೆ.

Advertisement
Advertisement
Advertisement
Advertisement

9772294246 ನಂಬರಿಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಾವಣೆ ಪ್ರಾರಂಭವಾಗಿದ್ದು ಆಸಕ್ತರು ಈ ನಂಬರ್ ಗೆ ಮಿಸ್ ಕಾಲ್ ಕೊಡುವುದರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಮಿಸ್ ಕಾಲ್ ಕೊಟ್ಟು ನೋಂದಾವಣೆ ಮಾಡುವವರಿಗೆ 10 ದಿನದ ಒಳಗಾಗಿ ವಿದ್ಯಾಮಾತಾ ಫೌಂಡೇಶನ್ ಮೂಲಕ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುವುದು.

Advertisement

ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚಿನ ವಿವಿಧ ಕ್ಷೇತ್ರದ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ ಯಿಂದ ಐ.ಟಿ.ಐ., ಪಿ.ಯು.ಸಿ , ಡಿಪ್ಲೊಮಾ, ಪದವಿ , ಸ್ನಾತಕೋತ್ತರ ಪದವಿ ಮುಗಿಸಿರುವ ಅಥವಾ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗುವುದು.

ಉದ್ಯೋಗ ಮೇಳವು ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದ್ದು ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದ ದಿನಾಂಕವನ್ನು ನೋಂದಾವಣೆ ಮಾಡಿದ ವಿದ್ಯಾರ್ಥಿಗಳಿಗೆ 10 ದಿನದ ಮುಂಚಿತವಾಗಿ ತಿಳಿಸಲಾಗುವುದು ಮತ್ತು ಉದ್ಯೋಗ ನೇರ ಸಂದರ್ಶನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ತಿಳಿಸಲಾಗುವುದು.

Advertisement

ಈ ವರ್ಷವೂ 8 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು ವಿದ್ಯಾಮಾತಾ ಫೌಂಡೇಶನ್ ಜನಪ್ರತಿನಿಧಿಗಳ, ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲು ಉದ್ದೇಶಿಸಿದೆ. ನೋಂದಾವಣೆ ಮಾಡಲು 9772294246 ನಂಬರಿಗೆ ಮಿಸ್ ಕಾಲ್ ಕೊಡಬಹುದು.

ಹೆಚ್ಚಿನ ಮಾಹಿತಿಗಾಗಿ: ವಿದ್ಯಾಮಾತಾ ಅಕಾಡೆಮಿ, ಹಿಂದುಸ್ಥಾನ್ ಕಾಂಪ್ಲೆಕ್ಸ್ , ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ದ.ಕ. ಫೋನ್ ನಂ.: 9620468869 /9148935808

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror