ವಿದ್ಯಾಮಾತಾ ಫೌಂಡೇಶನ್ ವತಿಯಿಂದ ಪುತ್ತೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಉದ್ಯೋಗ ಮೇಳಕ್ಕೆ ನೋಂದಾವಣೆಯನ್ನು ಕಳೆದ 10 ದಿನಗಳ ಹಿಂದೆ ಪ್ರಾರಂಭಿಸಲಾಗಿದ್ದು 2 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಈಗಾಗಲೇ ನೋಂದಾವಣೆಯನ್ನು ಮಾಡಿದ್ದಾರೆ.
9772294246 ನಂಬರಿಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಾವಣೆ ಪ್ರಾರಂಭವಾಗಿದ್ದು ಆಸಕ್ತರು ಈ ನಂಬರ್ ಗೆ ಮಿಸ್ ಕಾಲ್ ಕೊಡುವುದರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಲು ಅವಕಾಶವನ್ನು ಕಲ್ಪಿಸಿ ಕೊಡಲಾಗಿದೆ. ಮಿಸ್ ಕಾಲ್ ಕೊಟ್ಟು ನೋಂದಾವಣೆ ಮಾಡುವವರಿಗೆ 10 ದಿನದ ಒಳಗಾಗಿ ವಿದ್ಯಾಮಾತಾ ಫೌಂಡೇಶನ್ ಮೂಲಕ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸಲಾಗುವುದು.
ಉದ್ಯೋಗ ಮೇಳದಲ್ಲಿ ನೂರಕ್ಕೂ ಹೆಚ್ಚಿನ ವಿವಿಧ ಕ್ಷೇತ್ರದ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ ಯಿಂದ ಐ.ಟಿ.ಐ., ಪಿ.ಯು.ಸಿ , ಡಿಪ್ಲೊಮಾ, ಪದವಿ , ಸ್ನಾತಕೋತ್ತರ ಪದವಿ ಮುಗಿಸಿರುವ ಅಥವಾ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಮುಕ್ತವಾಗಿ ಭಾಗವಹಿಸಲು ಅವಕಾಶವನ್ನು ಕಲ್ಪಿಸಲಾಗುವುದು.
ಉದ್ಯೋಗ ಮೇಳವು ಪುತ್ತೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆ ಸುದಾನ ವಸತಿಯುತ ಶಾಲೆಯಲ್ಲಿ ನಡೆಯಲಿದ್ದು ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿದೆ. ಉದ್ಯೋಗ ಮೇಳದ ದಿನಾಂಕವನ್ನು ನೋಂದಾವಣೆ ಮಾಡಿದ ವಿದ್ಯಾರ್ಥಿಗಳಿಗೆ 10 ದಿನದ ಮುಂಚಿತವಾಗಿ ತಿಳಿಸಲಾಗುವುದು ಮತ್ತು ಉದ್ಯೋಗ ನೇರ ಸಂದರ್ಶನಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ತಿಳಿಸಲಾಗುವುದು.
ಈ ವರ್ಷವೂ 8 ಸಾವಿರಕ್ಕೂ ಮಿಕ್ಕಿದ ಉದ್ಯೋಗಾಕಾಂಕ್ಷಿಗಳು ಭಾಗವಹಿಸುವ ನಿರೀಕ್ಷೆಯಿದ್ದು ವಿದ್ಯಾಮಾತಾ ಫೌಂಡೇಶನ್ ಜನಪ್ರತಿನಿಧಿಗಳ, ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಸಲು ಉದ್ದೇಶಿಸಿದೆ. ನೋಂದಾವಣೆ ಮಾಡಲು 9772294246 ನಂಬರಿಗೆ ಮಿಸ್ ಕಾಲ್ ಕೊಡಬಹುದು.
ಹೆಚ್ಚಿನ ಮಾಹಿತಿಗಾಗಿ: ವಿದ್ಯಾಮಾತಾ ಅಕಾಡೆಮಿ, ಹಿಂದುಸ್ಥಾನ್ ಕಾಂಪ್ಲೆಕ್ಸ್ , ಎಪಿಎಂಸಿ ರಸ್ತೆ, ಸಿಟಿ ಆಸ್ಪತ್ರೆ ಹತ್ತಿರ, ಪುತ್ತೂರು, ದ.ಕ. ಫೋನ್ ನಂ.: 9620468869 /9148935808
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…