ವಿದ್ಯಾಮಾತಾ ಅಕಾಡೆಮಿ ಸುಳ್ಯ ಶಾಖೆ ಉದ್ಘಾಟನೆ | ಸುಳ್ಯಕ್ಕೆ ಕಾಲಿಟ್ಟಿದೆ 4000 ಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವಂತೆ ಮಾಡಿದ ಸಂಸ್ಥೆ |

September 28, 2023
6:06 PM
ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಉದ್ಘಾಟನೆಗೊಂಡಿತು.

 ಸ್ಫರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಮೂಲಕ  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ಸಮಯಗಳಿಂದ ಸದ್ದು ಮಾಡಿತ್ತಿರುವ ವಿದ್ಯಾಮಾತಾ ಅಕಾಡೆಮಿಯ ಶಾಖೆ ಈಗ ಸುಳ್ಯದಲ್ಲಿ ಉದ್ಘಾಟನೆಗೊಂಡಿದೆ. ಕಳೆದ 5 ವರ್ಷಗಳಲ್ಲಿ 4000 ಕ್ಕೂ ಅಧಿಕ ಮಂದಿಗೆ ಉದ್ಯೋಗ ಸಿಗುವ ಅವಕಾಶವನ್ನು ಮಾಡಿಕೊಟ್ಟಿದೆ.ಪುತ್ತೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಸಂಸ್ಥೆ ಇದೀಗ ಸುಳ್ಯದಲ್ಲಿ ಶಾಖೆಯನ್ನು ತೆರೆದಿದೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಸಂಸ್ಥೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖೆ ಸುಳ್ಯ ರಥಬೀದಿಯ ಟಿಎಪಿಸಿಎಂಎಸ್ ಕಟ್ಟಡದಲ್ಲಿ ಗುರುವಾರ ಉದ್ಘಾಟನೆಗೊಂಡಿತು.ಪುತ್ತೂರು ಮಾಜಿ ಶಾಸಕಿ ಶಕುಂತಳಾ ಟಿ ಶೆಟ್ಟಿ, ಟಿಎಪಿಸಿಎಂಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣಾ ವಿನಯಚಂದ್ರ, ಪುತ್ತೂರು ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ, ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿಯ ಅಧ್ಯಕ್ಷ ಪಿ.ಸಿ.ಜಯರಾಮ, ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಎನ್.ಜಯಪ್ರಕಾಶ್ ರೈ, ಕೆ.ಎಂ.ಎಫ್ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಪಿ.ಎಸ್.ಗಂಗಾಧರ, ಕಾರ್ಯನಿರ್ವಹಣಾಧಿಕಾರಿ ಜಯರಾಮ ದೇರಪ್ಪಜ್ಜನಮನೆ, ಪ್ರೊ.ಎಂ.ಬಾಲಚಂದ್ರ ಗೌಡ, ಪೂವಪ್ಪ ಕಣಿಯೂರು, ಎ.ಕೆ.ಜಯರಾಮ ರೈ, ಶಿಕ್ಷಕ ಅರವಿಂದ ಚೊಕ್ಕಾಡಿ, ಪೂವಪ್ಪ ಕಣಿಯೂರು ಮೊದಲಾದವರು ಭಾಗವಹಿಸಿದರು.

ಇದೇ ಸಂದರ್ಭ ಅಗ್ನಿವೀರ್ ಆಗಿ ಆಯ್ಕೆಯಾದ ಅಕಾಡೆಮಿಯ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಇದೇ ವೇಳೆ ನಿತ್ಯಾನಂದ ಮುಂಡೋಡಿ, ಜಯರಾಮ ದೇರಪ್ಪಜ್ಜನಮನೆ, ಪೂವಪ್ಪ ಕಣಿಯೂರು, ಸಾವಿತ್ರಿ ಕಣೆಮರಡ್ಕ, ಅರವಿಂದ ಚೊಕ್ಕಾಡಿ, ನಂದರಾಜ ಸಂಕೇಶ, ನಯನಾ ವಿ ರೈ ಅವರನ್ನು ಗೌರವಿಸಲಾಯಿತು.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಸ್ವಾಗತಿಸಿದರು. ಬಾಲಕೃಷ್ಣ ಪೊರ್ದಾಲ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕಿ ರಮ್ಯಾ ಭಾಗ್ಯೇಶ ರೈ ವಂದಿಸಿದರು.

ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕ ಭಾಗ್ಯೇಶ್ ರೈ ಅವರು 2017 ರಲ್ಲಿ ಪುತ್ತೂರಿನಲ್ಲಿ ವಿದ್ಯಾಮಾತಾ ಫೌಂಡೇಶನ್ 2017 ನ್ನು ಹುಟ್ಟು ಹಾಕಿದರು .2020 ರಲ್ಲಿ ವಿದ್ಯಾಮಾತಾ ಅಕಾಡಮಿ ಸ್ಥಾಪಿಸಿ ಸರ್ಕಾರದ ಮಾನ್ಯತೆ ಪಡೆದು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ್ಯ ತರಬೇತಿ ಆರಂಭಿಸಿದರು.ಕಳೆದ ಎರಡು ವರ್ಷಗಳಲ್ಲಿ 90 ಕ್ಕೂ ಹೆಚ್ಚು ಉದ್ಯೋಗಿಗಳನ್ನು ಸರ್ಕಾರಿ ಸೇವೆಗೆ ಸೇರುವಂತೆ ತರಬೇತು ಮಾಡಿದ್ದಾರೆ. ಸುಮಾರು 4000 ಕ್ಕೂ ಅಧಿಕ ಮಂದಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಲಭ್ಯವಾಗುವಂತೆ ಅವಕಾಶ ಕಲ್ಪಿಸಿದ್ದಾರೆ. ಸುಳ್ಯ ತಾಲೂಕಿನಲ್ಲಿ ಇದೀಗ ಶಾಖೆ ಆರಂಭಿಸಿದ್ದಾರೆ. ಎಲ್ಲಾ ವೃತ್ತಿಪರ ಕೋರ್ಸ್ ಗಳ ಅರ್ಜಿ,ಉದ್ಯೋಗ ಮಾಹಿತಿ,ತರಬೇತಿ, ಎಲ್ಲಾ ಶ್ರೇಣಿಯ ಉದ್ಯೋಗಗಳಿಗೆ ತರಬೇತಿ ಈ ಸಂಸ್ಥೆಯಲ್ಲಿ ಸಿಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror