ದ ಕ ಜಿಲ್ಲೆಯ ಪ್ರಮುಖ ಉದ್ಯಮಿ, ತುಳುನಾಡಿನ ಕಾರಣಿಕ ಕ್ಷೇತ್ರ ಎಡಪದವು ಶಾಸ್ತಾರ ಭೂತನಾಥೇಶ್ವರ ಕ್ಷೇತ್ರದ ಆಡಳಿತ ಮೊಕ್ತೇಸರಾಗಿರುವ ಕೇಸರಿ ವಸ್ತ್ರದೊಂದಿಗೆ ಗುರುತಿಸಿಕೊಂಡಿರುವ ಮಂಗಳೂರಿನ ವಿಜಯನಾಥ ವಿಠಲ್ ಶೆಟ್ಟಿ ಅವರು ಶೀಘ್ರದಲ್ಲಿಯೇ ಆಮ್ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶ್ವ ಹಿಂದೂ ಪರಿಷತ್ ನ ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಮಂಗಳೂರಿನಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮ ವಿರಾಟ್ ಹಿಂದೂ ಸಂಗಮ ಕಾರ್ಯಕ್ರಮದ ಯಶಸ್ವಿನ ರೂವಾರಿಯಾಗಿದ್ದ ವಿಜಯನಾಥ ವಿಠಲ್ ಶೆಟ್ಟಿಯವರು ಉದ್ಯಮ ಕ್ಷೇತ್ರದಲ್ಲಿಯೂ , ಸಾಮಾಜಿಕ ಕ್ಷೇತ್ರದಲ್ಲೂ ಹೆಸರುವಾಸಿಯಾಗಿದ್ದಾರೆ. ರಾಜಕೀಯವಾಗಿಯೂ ತೊಡಗಿಸಿಕೊಂಡಿದ್ದ ವಿಜಯನಾಥ ವಿಠಲ್ ಶೆಟ್ಟಿ ಅವರು ಕಳೆದ ಕೆಲವು ಸಮಯಗಳಿಂದ ತಟಸ್ಥರಾಗಿದ್ದರು. ಇದೀಗ ಶೀಘ್ರವೇ ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿ ಹಾಗೂ ಬೆಳವಣಿಗೆಯ ಗುರಿ ಇರಿಸಿಕೊಂಡು ಆಮ್ ಆದ್ಮಿ ಪಕ್ಷಕ್ಕೆ ಸೇರುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ದೆಹಲಿ ಹಾಗೂ ರಾಜ್ಯದಲ್ಲೂ ಮಾತುಕತೆ ನಡೆದಿತ್ತು, ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಲಿದೆ ಎನ್ನುವುದು ರಾಜಕೀಯ ವಲಯದ ಚರ್ಚೆ.
ಈ ನಡುವೆ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಪ್ರಮುಖ ನಾಯಕರೊಬ್ಬರು, ಉದ್ಯಮಿ ಹಾಗೂ ಉನ್ನತ ವ್ಯಾಸಾಂಗ ಮಾಡಿರುವ ಯುವ ನಾಯಕರೊಬ್ಬರ ಜೊತೆಯೂ ಮಾತುಕತೆ ನಡೆದಿದೆ ಎಂಬುದು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗುತ್ತಿದೆ.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…