ವಿಜಯನಗರ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಖಾಲಿಯಿದ್ದ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಸಲ್ಲಿಸಿದ್ದ ಅಪೂರ್ಣಗೊಂಡ ಅರ್ಜಿಗಳನ್ನು ಮರು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಎಸ್.ಶ್ವೇತಾ ತಿಳಿಸಿದ್ದಾರೆ.
ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರು ಜಿಲ್ಲೆಯ ಎಲ್ಲಾ ೬ ತಾಲೂಕುಗಳಾದ ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ, ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ, ಕೊಟ್ಟೂರು ತಾಲೂಕಿನಲ್ಲಿ ಈಗಾಗಲೇ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸುವ ವೇಳೆಯಲ್ಲಿ ಕೆಲವು ತಾಂತ್ರಿಕ ಸಮಸ್ಯೆಯಿಂದಾಗಿ ಬಹುತೇಕ ಅರ್ಜಿಗಳಲ್ಲಿ ಭಾವಚಿತ್ರ, ಸಹಿ ಸೇರಿದಂತೆ ಹಲವು ಲೋಪ ದೋಷಗಳು ಉಂಟಾಗಿ ಅರ್ಜಿಗಳು ಅಪೂರ್ಣಗೊಂಡಿವೆ ಹಾಗಾಗಿ ಇದೇ ೨೬ ರಿಂದ ಜನವರಿ ೫ ರವರೆಗೆ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದಾವಣಗೆರೆಯ 19 ಕೇಂದ್ರಗಳಲ್ಲಿ ಡಿ. 29 ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸುವ…
ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯು ಜನವರಿ…
ಗುತ್ತಿಗಾರಿನ ಯಕ್ಷಕಲಾಭಿಮಾನಿ ಮಿತ್ರರ ವತಿಯಿಂದ ಹನುಮಗಿರಿ ಮೇಳದಿಂದ "ಪಾರಿಜಾತ-ಅಕ್ಷಯಾಂಬರ-ಕುಶಲವ" ಯಕ್ಷಗಾನ ಬಯಲಾಟ ಹಾಗೂ…
ಅಖಿಲ ಹವ್ಯಕ ಮಹಾಸಭೆಗೆ 81 ವರ್ಷಗಳು ತುಂಬಿದ ಸಂಭ್ರಮದಲ್ಲಿ ವಿಶ್ವಹವ್ಯಕ ಸಮ್ಮೇಳನವು ಬೆಂಗಳೂರಿನ…
ಬಂಗಾಳಕೊಲ್ಲಿಯ ಕಡೆಯಿಂದ ಹಿಂಗಾರು ರೀತಿಯ ಮಾರುತಗಳು ಬರುತ್ತಿರುವುದರಿಂದ ಈಗಿನ ಈ ಮೋಡ ಹಾಗೂ…
ಸುಮಾರು 32 ವರ್ಷಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಸಾಮಾಜಿಕ ಜಾಲತಾಣದ ನೆರವಿನಿಂದಾಗಿ ಕುಟುಂಬಕ್ಕೆ…