ವಿಜಯನಗರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಂತೆ ಎಫ್ಎಕ್ಯೂ (FAQ) ಗುಣಮಟ್ಟದ ಬಿಳಿಜೋಳ ಮತ್ತು ಮಾಲ್ದಂಡಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ಮುಂಗಾರು ಋತುವಿನಲ್ಲಿ ರೈತರಿಂದ ಜೋಳ ಖರೀದಿ ನಡೆಯಲಿದ್ದು, ಮಾರ್ಚ್ 31ರವರೆಗೆ ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಗರಿಷ್ಠ 150 ಕ್ವಿಂಟಾಲ್ ಜೋಳವನ್ನು ಖರೀದಿಸಲಾಗುತ್ತದೆ. ಬಿಳಿಜೋಳಕ್ಕೆ ಪ್ರತಿ ಕ್ವಿಂಟಾಲ್ ₹3,699 ಹಾಗೂ ಮಾಲ್ದಂಡಿ ಜೋಳಕ್ಕೆ ₹3,749 ದರ ನಿಗದಿಪಡಿಸಲಾಗಿದೆ.
ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಎಪಿಎಂಸಿ ಯಾರ್ಡ್‌ಗಳು ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ




