ಬಿಳಿಜೋಳ–ಮಾಲ್ದಂಡಿ ಜೋಳ ಖರೀದಿ ಆರಂಭ | ಎಕರೆಗೆ 15 ಕ್ವಿಂಟಾಲ್‌ವರೆಗೆ ಬೆಂಬಲ ಬೆಲೆ

January 19, 2026
7:17 AM

ವಿಜಯನಗರ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಂತೆ ಎಫ್ಎಕ್ಯೂ (FAQ) ಗುಣಮಟ್ಟದ ಬಿಳಿಜೋಳ ಮತ್ತು ಮಾಲ್ದಂಡಿ ಜೋಳವನ್ನು ರೈತರಿಂದ ನೇರವಾಗಿ ಖರೀದಿಸಲಾಗುವುದು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.

ಮುಂಗಾರು ಋತುವಿನಲ್ಲಿ ರೈತರಿಂದ ಜೋಳ ಖರೀದಿ ನಡೆಯಲಿದ್ದು, ಮಾರ್ಚ್ 31ರವರೆಗೆ ಪ್ರತಿ ಎಕರೆಗೆ 15 ಕ್ವಿಂಟಾಲ್‌ನಂತೆ ಗರಿಷ್ಠ 150 ಕ್ವಿಂಟಾಲ್ ಜೋಳವನ್ನು ಖರೀದಿಸಲಾಗುತ್ತದೆ. ಬಿಳಿಜೋಳಕ್ಕೆ ಪ್ರತಿ ಕ್ವಿಂಟಾಲ್ ₹3,699 ಹಾಗೂ ಮಾಲ್ದಂಡಿ ಜೋಳಕ್ಕೆ ₹3,749 ದರ ನಿಗದಿಪಡಿಸಲಾಗಿದೆ.

ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಎಪಿಎಂಸಿ ಯಾರ್ಡ್‌ಗಳು ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror