ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

April 21, 2026
7:21 AM
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್ ಆರಂಭಿಸಲಾಗಿದೆ. ಜನರು ಬಿಸಿಲಿನ ವೇಳೆಯಲ್ಲಿ ಹೊರಗೆ ಹೋಗದೇ, ಹೆಚ್ಚು ದ್ರವ ಆಹಾರ ಸೇವಿಸಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ 10 ಹಾಸಿಗೆಗಳ ಹವಾನಿಯಂತ್ರಿತ (AC) ಪ್ರತ್ಯೇಕ ವಿಶೇಷ ವಾರ್ಡ್ ಸ್ಥಾಪಿಸಲಾಗಿದೆ. ಬಿಸಿಲಿನ ತೀವ್ರತೆಯಿಂದ ಅನಾರೋಗ್ಯಕ್ಕೆ ಒಳಗಾಗುವ ರೋಗಿಗಳಿಗೆ ತಕ್ಷಣ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಈ ವ್ಯವಸ್ಥೆ ಮಾಡಲಾಗಿದೆ.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಉಷ್ಣಾಂಶದ ಪರಿಣಾಮವಾಗಿ ತಲೆಸುತ್ತು, ದೇಹದ ದೌರ್ಬಲ್ಯ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಈ ವಿಶೇಷ ವಾರ್ಡ್‌ನಲ್ಲಿ ತುರ್ತು ಚಿಕಿತ್ಸೆ, ಅಗತ್ಯ ಔಷಧಿ ಮತ್ತು ತಜ್ಞ ವೈದ್ಯರ ಸೇವೆ ಲಭ್ಯವಾಗಲಿದೆ.

ಜಿಲ್ಲಾಸ್ಪತ್ರೆಯ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಅವರು ದೂರದರ್ಶನಕ್ಕೆ ಪ್ರತಿಕ್ರಿಯಿಸಿ, “ಮುಂದಿನ ತಿಂಗಳವರೆಗೆ ಬಿಸಿಲಿನ ತಾಪ ಹೆಚ್ಚಾಗುವ ಸಾಧ್ಯತೆ ಇದೆ. ಜನರು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಹೊರಗೆ ಹೋಗುವುದನ್ನು ತಪ್ಪಿಸಿಕೊಳ್ಳಬೇಕು. ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ದ್ರವ ಆಹಾರ ಮತ್ತು ತಂಪು ಪಾನೀಯಗಳನ್ನು ಸೇವಿಸುವುದು ಅಗತ್ಯ,” ಎಂದು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇನ್ನು ಸ್ಥಳೀಯರಾದ ಮಲ್ಲು ಜಾಲಗೇರಿ ಅವರು, “ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನೇ ದಿನೇ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಶೇಷ ವಾರ್ಡ್ ಆರಂಭಿಸಿರುವುದು ಉತ್ತಮ ಕ್ರಮ,” ಎಂದು ಅಭಿಪ್ರಾಯಪಟ್ಟರು.

 ಜನರಿಗೆ ಸಲಹೆಗಳು

  • ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಹೊರಗೆ ಹೋಗಬೇಡಿ
  • ಸಾಕಷ್ಟು ನೀರು ಹಾಗೂ ದ್ರವ ಆಹಾರ ಸೇವಿಸಿ
  • ತಲೆ ಮುಚ್ಚಿಕೊಂಡು ಹೊರಗೆ ಹೋಗಿ
  • ಅನಾರೋಗ್ಯ ಕಂಡುಬಂದರೆ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ

Due to rising temperatures in Vijayapura district, a 10-bed air-conditioned special ward has been set up at the district hospital as a precautionary measure. Doctors have advised people to avoid going out during peak heat hours and to stay hydrated.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror