ವಿಕಸಿತ ಕೃಷಿ ಸಂಕಲ್ಪ ಅಭಿಯಾನ |  ರೈತರ ಆದಾಯ ದ್ವಿಗುಣ ಉದ್ದೇಶದಿಂದ ಯೋಜನೆ

May 30, 2025
11:14 PM

ದಾವಣಗೆರೆಯಲ್ಲಿ  ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರಾಷ್ಟ್ರೀಯ  ಕೃಷಿ ಕೀಟಬಾಧೆ, ಸಂಶೋಧನಾ ಮಂಡಳಿಯ ಅಧಿಕಾರಿ ಡಾ. ಸಾಗರ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಡಾ. ಸಾಗರ್, ಕೃಷಿ ಅಭಿವೃದ್ಧಿ ಮತ್ತು ರೈತರ ಆದಾಯ ದ್ವಿಗುಣಗೊಳಿಸುವ ಮಹತ್ವಾಕಾಂಕ್ಷೆಯಿಂದ ಕೇಂದ್ರ ಸರ್ಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ. ಇದರ ಅಡಿಯಲ್ಲಿ ಮುಂಗಾರು ಹಂಗಾಮಿನಲ್ಲಿ ರೈತರು ಬೆಳೆಯಬೇಕಾದ ಬೆಳೆಗಳ ಮಾಹಿತಿ, ಕೀಟನಾಶಕಗಳ ಬಳಕೆ ಕುರಿತು ಜಾಗೃತಿ ಹಾಗೂ ರೈತರಿಗಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುವುದು ಎಂದರು.

ಡಾ. ಅವಿನಾಶ್, ಮುಂಗಾರು ಹಂಗಾಮಿನಲ್ಲಿ ಯಾವ ಯಾವ ಬೆಳೆಗಳನ್ನು ಬೆಳೆದರೆ ಹೆಚ್ಚಿನ ಇಳುವರಿ ಬರಲಿದೆ. ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸಿಕೊಳ್ಳುವ ಕುರಿತು ಅಭಿಯಾನದಡಿ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಡಾ. ತಿಮ್ಮಣ್ಣ, ಕೇವಲ ಇಳುವರಿ ಹೆಚ್ಚಾದರೆ ಸಾಲದು, ಮಣ್ಣಿನ ಆರೋಗ್ಯ ರಕ್ಷಣೆಯತ್ತ ರೈತರು ಗಮನ ಹರಿಸಬೇಕು. ಈ ಕುರಿತಂತೆಯೂ ರೈತರಿಗೆ ಅರಿವು ಮೂಡಿಸಲಾಗುವುದು. ಬೆಳೆಗಳಿಗೆ ಎಷ್ಟು ಪ್ರಮಾಣದಲ್ಲಿ ಪೋಷಕಾಂಶಗಳನ್ನು ಬಳಕೆ ಮಾಡಬೇಕೆಂಬ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದರು.

ಕೃಷಿಕ ದ್ಯಾಮಣ್ಣ, ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆಯಂತೆ ಕೃಷಿ ಹೊಂಡದಲ್ಲಿ ಮೀನುಗಳನ್ನು ಸಾಕಾಣಿಕೆ ಮಾಡಿ, ಹೆಚ್ಚಿನ ಆದಾಯ ಗಳಿಸಿರುವುದಾಗಿ ತಿಳಿಸಿದರು. ಮತ್ತೋರ್ವ ಕೃಷಿಕ  ಪರಮೇಶ್ವರಪ್ಪ, ಸಮಗ್ರ ಕೃಷಿ ಯೋಜನೆಯಡಿಯಲ್ಲಿ ಕೃಷಿ ಅಧಿಕಾರಿಗಳು ನೀಡಿದ ಮಾಹಿತಿಯಿಂದ ಎರೆಹುಳು ಗೊಬ್ಬರದ ಘಟಕ ಮತ್ತು ಜೇನು ಸಾಕಾಣಿಕೆಯಲ್ಲಿ ತೊಡಗಿಕೊಂಡಿದ್ದು, ಮಿಶ್ರ ಬೆಳೆ ಬೆಳೆಯುವ ಮೂಲಕವೂ ಆದಾಯ ಹೆಚ್ಚಿಸಿಕೊಂಡಿರುವುದಾಗಿ ತಿಳಿಸಿದರು.

ಕೃಷಿ, ತೋಟಗಾರಿಕೆ ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು, ತಜ್ಞರು ಮತ್ತಿತರರು ಉಪಸ್ಥಿತರಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror