ಈ ಮುಂಗಾರು ಹಂಗಾಮಿನಲ್ಲಿ ಒಂದು ವಿನೂತನ ಕಾರ್ಯಕ್ರಮವು ಕೃಷಿಕರಿಗೆ ಲಭ್ಯವಾಗಲಿದೆ. ಭಾರತೀಯ ಕೃಷಿ ಅನುಸಂಧಾನ ಪರಿಷತ್ತು ಹಾಗೂ ಅದರ ವಿವಿಧ ಸಂಸ್ಥೆಗಳು ದೇಶದ ಕೃಷಿ ವಿಜ್ಞಾನ ಕೇಂದ್ರಗಳು ಕೃಷಿ ವಿಶ್ವವಿದ್ಯಾಲಯಗಳು ಮತ್ತು ಕೃಷಿ ಇಲಾಖೆಯ ಸಹಯೋಗದಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು ನಡೆಯಲಿದ್ದು ರೈತರ ಮನೆಬಾಗಿಲಿಗೆ ವಿಜ್ಞಾನಿಗಳು ಬರಲಿದ್ದಾರೆ.
ದೇಶದ ಎಲ್ಲ ಗಾಮಗಳನ್ನು ಈ ಯೋಜನೆ ಅಡಿಯಲ್ಲಿ ಸಂಪರ್ಕಿಸಿ ಮಾಹಿತಿ ನೀಡುವುದು ಈ ಅಭಿಯಾನದ ಉದ್ದೇಶವಾಗಿದ್ದು, ಇದರಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಇಲ್ಲಿ ರೈತರನ್ನು ಕರೆಸಿ ಹೊಸ ಹೊಸ ತಂತ್ರಜ್ಞಾನಗಳು, ಹೊಸ ಬೀಜಗಳು, ನಿಖರವಾದ ಹವಾಮಾನದ ಮಾಹಿತಿ ಮತ್ತು ಸರಕಾರದ ನಾನಾ ಲಾಭದಾಯಕ ಯೋಜನೆಗಳು, ಕೃಷಿಯಲ್ಲಿ ಹೆಚ್ಚಿನ ಲಾಭವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಮಾಹಿತಿ ನೀಡಲಿದ್ದಾರೆ. ಕೃಷಿ ವಿಜ್ಞಾನಿಗಳು ಮತ್ತು ಸರಕಾರವು ನೇರವಾಗಿ ಗ್ರಾಮದಡೆ ಬರುವರು, ಕೃಷಿ ಕ್ಷೇತ್ರಕ್ಕೆ ಹೊಸ ಹೊಸ ತಂತ್ರಜ್ಞಾನಗಳು, ಹೊಸ ಬೀಜಗಳು, ನಿಖರವಾದ ಹವಾಮಾನದ ಮಾಹಿತಿ ಮತ್ತು ಸರ್ಕಾರದ ವಿವಿಧ ಲಾಭದಾಯಕ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಈ ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ 700 ಜಿಲ್ಲೆಗಳಲ್ಲಿನ ಸುಮಾರು 1.5 ರಿಂದ 2 ಕೋಟಿ ರೈತರೊಂದಿಗೆ ನೇರ ಸಂವಾದ ನಡೆಯಲಿದೆ. ಈ ಸಂದರ್ಭದಲ್ಲಿ ಹೊಸ ತಂತ್ರಜ್ಞಾನಗಳು ಮತ್ತು ಹೊಸ ಬೀಜಗಳ ಮಾಹಿತಿಯನ್ನು ಒಟ್ಟು ಮೂರು ಕೋಟಿ ರೈತರಿಗೆ ತಲುಪಿಸಲಾಗುತ್ತದೆ, ಜೊತೆಗೆ ರೈತರಿಗೆ ಸರಕಾರದ ಯೋಜನೆಗಳ ಕುರಿತು ಕೂಡ ಮಾಹಿತಿ ನೀಡಲಾಗುತ್ತದೆ. ಅವರು ನೀಡುವ ಪ್ರತಿಕ್ರಿಯೆಗಳನ್ನು ಸಂಗ್ರಹಿಸಲ್ಪಟ್ಟು ಅವರ ಹೊಸ ಆವಿಷ್ಕಾರಗಳನ್ನು ಸಂಶೋಧನೆ ಮತ್ತು ಪ್ರಸಾರ ಚಟುವಟಿಕೆಗಳಲ್ಲಿ ಬಳಸಲಾಗುತ್ತದೆ.
ಬೆಳೆ, ಮಣ್ಣು ಮತ್ತು ಲಭ್ಯವಿರುವ ಸಂಪನ್ಮೂಲಗಳ ಆಧಾರದ ಮೇಲೆ ತಜ್ಞರಿಂದ ಸಲಹೆಗಳನ್ನು ನೀಡಲಾಗುತ್ತದೆ. ಜೊತೆಗೆ, ಸರ್ಕಾರಿ ಯೋಜನೆಗಳ ಲಾಭ ಪಡೆಯುವ ವಿಧಾನಗಳ ಕುರಿತು ಸಂಪೂರ್ಣ ಮಾಹಿತಿ ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯ ಆಯಾ ಗ್ರಾಮ ಪಂಚಾಯತ್ ಮೂಲಕ ಅಲ್ಲಿನ ರೈತರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ವಿಕಸಿತ ಸಂಕಲ್ಪ ಅಭಿಯಾನ ನಿಮ್ಮ ಗ್ರಾಮಕ್ಕೆ ಬಂದಾಗ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಲಾಭವನ್ನು ಪಡೆಯಿರಿ ನಿಮ್ಮ ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಿ ಎಂದು ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಟಡಾ. ಟಿ.ಜೆ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿ ದ್ದಾರೆ.
ಕಳೆದ ಕೆಲವು ದಿನಗಳಿಂದ ಅಡಿಕೆ ಬೆಳೆಗಾರರಿಗೆ ನಿರೀಕ್ಷೆಯ ಮೇಲೆ ನಿರೀಕ್ಷೆ.ಚಾಲಿ ಅಡಿಕೆ ಧಾರಣೆ…
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಕೃಷ್ಣ ಭಟ್…
ಕುಶಾಲಿ ಗೌಡ, ಗ್ರೆಡ್ -3, ಜ್ಞಾನ ಅಕಾಡೆಮಿ, ತರಬನ ಹಳ್ಳಿ ಬೆಂಗಳೂರು |…
ಅನ್ವಿತಾ ಸಿ, 9 ನೇ ತರಗತಿ, ಸರ್ಕಾರಿ ಪ್ರೌಢಶಾಲೆ , ಪಂಜ |…
ಜಮ್ಮು ಮತ್ತು ಕಾಶ್ಮೀರ, ಕರಾವಳಿ ಕರ್ನಾಟಕ, ಕೇರಳ ಮತ್ತು ಮಾಹೆಯ ಹಲವೆಡೆ ಮುಂದಿನ…
ದಕ್ಷಿಣ ಕನ್ನಡ , ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ…