ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

May 29, 2025
7:22 AM

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದೆ. ದೇಶದ 731 ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ 700 ಜಿಲ್ಲೆಗಳಲ್ಲಿ ಜೂನ್ 12 ರ ವರೆಗೆ 15 ದಿನಗಳ ಕಾಲ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರಾಷ್ಟ್ರೀಯ ಕಾರ್ಯಕ್ರಮ ಆಯೋಜಿಸಲಾಗಿದೆ.

ಅಭಿಯಾನದಡಿ ಕೃಷಿ ಸಮುದಾಯಕ್ಕೆ ಮಣ್ಣಿನ ಆರೋಗ್ಯ, ಮಣ್ಣು ಮತ್ತು ನೀರಿನ ಸಂರಕ್ಷಣೆ, ಹವಾಮಾನ ಸ್ಥಿತಿ ಸ್ಥಾಪಕ ತಂತ್ರಜ್ಞಾನ, ನೈಸರ್ಗಿಕ ಸಾವಯವ ಕೃಷಿ, ತೋಟಗಾರಿಕೆ ಬೆಳೆಗಳಲ್ಲಿ ಉತ್ಪಾದನಾ ತಂತ್ರಜ್ಞಾನ, ಕುರಿತು ಮಾರ್ಗದರ್ಶನ ನೀಡಲಾಗುವುದು ಎಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಎನ್.ದೇವರಾಜ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 135 ಹಳ್ಳಿಗಳಲ್ಲಿ ’ಮುಂಗಾರು ಪೂರ್ವ ಆಂದೋಲನ – ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ದ ಮೂಲಕ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಕೃಷಿಯಲ್ಲಿ ಡ್ರೋಣ್ ಬಳಕೆ ಹಾಗೂ ಇತರ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು  ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror