ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ನಡೆಯಲಿದೆ. ದೇಶದ 731 ಕೃಷಿ ವಿಜ್ಞಾನ ಕೇಂದ್ರಗಳ ಮೂಲಕ 700 ಜಿಲ್ಲೆಗಳಲ್ಲಿ ಜೂನ್ 12 ರ ವರೆಗೆ 15 ದಿನಗಳ ಕಾಲ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ರಾಷ್ಟ್ರೀಯ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಭಿಯಾನದಡಿ ಕೃಷಿ ಸಮುದಾಯಕ್ಕೆ ಮಣ್ಣಿನ ಆರೋಗ್ಯ, ಮಣ್ಣು ಮತ್ತು ನೀರಿನ ಸಂರಕ್ಷಣೆ, ಹವಾಮಾನ ಸ್ಥಿತಿ ಸ್ಥಾಪಕ ತಂತ್ರಜ್ಞಾನ, ನೈಸರ್ಗಿಕ ಸಾವಯವ ಕೃಷಿ, ತೋಟಗಾರಿಕೆ ಬೆಳೆಗಳಲ್ಲಿ ಉತ್ಪಾದನಾ ತಂತ್ರಜ್ಞಾನ, ಕುರಿತು ಮಾರ್ಗದರ್ಶನ ನೀಡಲಾಗುವುದು ಎಂದು ದಾವಣಗೆರೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಟಿ.ಎನ್.ದೇವರಾಜ್ ಹೇಳಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ 135 ಹಳ್ಳಿಗಳಲ್ಲಿ ’ಮುಂಗಾರು ಪೂರ್ವ ಆಂದೋಲನ – ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ ದ ಮೂಲಕ ಜಾಗೃತಿಯನ್ನು ಮೂಡಿಸಲಾಗುತ್ತಿದೆ. ಕೃಷಿಯಲ್ಲಿ ಡ್ರೋಣ್ ಬಳಕೆ ಹಾಗೂ ಇತರ ಪ್ರಾತ್ಯಕ್ಷಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಬಿ.ಜಿ.ಹನುಮಂತರಾಯ ತಿಳಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…