Advertisement
MIRROR FOCUS

ವಿಕಸಿತ ಕೃಷಿ ಸಂಕಲ್ಪ ಅಭಿಯಾನ | 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ಸಂವಾದ

Share

ದೇಶಾದ್ಯಂತ ಮೇ 29 ರಿಂದ 15 ದಿನಗಳಕಾಲ ಹಮ್ಮಿಕೊಳ್ಳಲಾಗಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಸಂಪೂರ್ಣವಾಗಿ ಯಶಸ್ವಿಯಾಗಿರುವುದಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ವಿಕಸಿತ ಕೃಷಿ ಸಂಕಲ್ಪ ಅಭಿಯಾನದ ಅಡಿಯಲ್ಲಿ 2 ಸಾವಿರದ 170 ತಂಡಗಳನ್ನು ರಚಿಸಲಾಗಿತ್ತು. ಇದರಲ್ಲಿ 8 ಸಾವಿರಕ್ಕೂ ಅಧಿಕ ಕೃಷಿ ವಿಜ್ಞಾನಿಗಳು ಭಾಗಿಯಾಗಿದ್ದರು.  60 ಸಾವಿರಕ್ಕೂ ಅಧಿಕ ಗ್ರಾಮಗಳಿಗೆ  ಈ ತಂಡಗಳು ಭೇಟಿ ನೀಡಿದ್ದು, ಒಟ್ಟಾರೆ 1 ಕೋಟಿ 34 ಲಕ್ಷಕ್ಕೂ ಅಧಿಕ ರೈತರೊಂದಿಗೆ ನೇರ ಸಂವಾದ ನಡೆಸಿವೆ ಎಂದು ಮಾಹಿತಿ ನೀಡಿದರು.

ಕಳೆದ 11 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರದ ಬಲವರ್ಧನೆಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿದೆ. ಭವಿಷ್ಯದ ಆಹಾರ ಸುರಕ್ಷತೆಗೆ ಮತ್ತಷ್ಟು ಕ್ರಮಗಳು ಅಗತ್ಯವಾಗಿರುವ ಹಿನ್ನೆಲೆಯಲ್ಲಿ ಈ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು. ರೈತರ ಆದಾಯ ಹೆಚ್ಚಳಕ್ಕೆ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು. ಆಹಾರ ಉತ್ಪಾದನೆಯಲ್ಲಿ ಗರಿಷ್ಟ ಸಾಧನೆ ಮಾಡಲು ರೈತರು ಮತ್ತು ವಿಜ್ಞಾನಿಗಳ ಒಗ್ಗೂಡುವಿಕೆ ಅಗತ್ಯ. ದೇಶದ ವೈಜ್ಞಾನಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಸಂಸ್ಥೆಗಳು ಹಾಗೂ ಕೃಷಿಕರು ಒಟ್ಟಾಗಿ ಕಾರ್ಯ ನಿರ್ವಹಿಸಲು ಅನುಕೂಲವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ರೂಪಿಸಿಲಾಗಿತ್ತು . ಇದರಲ್ಲಿ ಪಾಲ್ಗೊಂಡ ವೈಜ್ಞಾನಿಕ ಸಮುದಾಯಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

21 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

2 days ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

3 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

3 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago