ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾಯಿಸಿದ್ದ ನೌಕೆ ‘ಚಂದ್ರಯಾನ-3’ ಯಶಸ್ವಿಯಾಗುತ್ತಿದೆ. ಚಂದ್ರನ 4ನೇ ಕಕ್ಷೆಯಿಂದ ಭಾರತದ ಇಸ್ರೋ ವಿಜ್ಞಾನಿಗಳು ಈ ನೌಕೆಯನ್ನ ಕಕ್ಷೆಗೆ ಸೇರಿಸಿದ್ದರು. ವಿಕ್ರಮ್ (ಲ್ಯಾಂಡರ್) ಮತ್ತು ಪ್ರಗ್ಯಾನ್ (ರೋವರ್) ಒಳಗೊಂಡಿರುವ ಚಂದ್ರಯಾನ-3 ಲ್ಯಾಂಡಿಂಗ್ ಮಾಡ್ಯೂಲ್ ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ ಎಂದು ಇಸ್ರೋ ವಿಜ್ಞಾನಿಗಳು ಪ್ರಕಟಿಸಿದ್ದಾರೆ. ನಾಳೆ ಸುಮಾರು 4 ಗಂಟೆಯ ಹೊತ್ತಿಗೆ ಡೀಬೂಸ್ಟಿಂಗ್ ಪ್ರಕ್ರಿಯೆ ನಡೆದು ಚಂದ್ರನ ಮೇಲೆ ಲ್ಯಾಂಡ್ ಆಗುವತ್ತ ಹೆಜ್ಜೆ ಇಡಲಿದೆ.
ಭೂಮಿಯಿಂದ ಲಕ್ಷಾಂತರ ಕಿಲೋ ಮೀಟರ್ ದೂರಕ್ಕೆ ಸಾಗಿರುವ ಚಂದ್ರಯಾನ-3 ಬಾಹ್ಯಾಕಾಶ ನೌಕೆ ಯಾನವನ್ನು ಪೂರೈಸಿದೆ. ಈ ಮೂಲಕ ಭಾರತದ ಕನಸು ನನಸಾಗಿದೆ. ಭಾರತವು ಬಾಹ್ಯಾಕಾಶದಲ್ಲಿ ಹೊಸ ಇತಿಹಾಸ ಬರೆದಿದೆ.
ಚಂದ್ರಯಾನ 3 ರ ಯಶಸ್ವಿ ಲ್ಯಾಂಡಿಂಗ್ ಬಳಿಕ ಯುನೈಟೆಡ್ ಸ್ಟೇಟ್ಸ್, ರಷ್ಯಾ ಮತ್ತು ಚೀನಾದ ಸಾಲಿಗೆ ಸೇರುವ ಈ ಸಾಧನೆಯನ್ನು ಸಾಧಿಸಿದ ವಿಶ್ವದ ನಾಲ್ಕನೇ ರಾಷ್ಟ್ರವಾಗಿ ಭಾರತ ಸೇರಿದೆ. ಆದರೆ ಇದುವರೆಗೂ ಚಂದ್ರನ ದಕ್ಷಿಣ ಧ್ರುವವನ್ನು ಬೇರೆ ಯಾವ ದೇಶವೂ ಮುಟ್ಟಿಲ್ಲ, ಭಾರತವೇ ಮೊದಲ ಬಾರಿಗೆ ತಲಪಿದೆ. ಈ ಮೂಲಕ ದೇಶದ ಹೆಮ್ಮೆಯ ಇಸ್ರೋ ಹೊಸ ಮೈಲಿಗಲ್ಲನ್ನು ಸಾಧಿಸಿದೆ.
ಅಪಘಾತಗಳನ್ನು ತಪ್ಪಿಸುವ ನಿಟ್ಟಿನಲ್ಲಿ ದೇಶಾದ್ಯಂತ 1 ಸಾವಿರದ 600 ಚಾಲಕ ತರಬೇತಿ ಕೇಂದ್ರಗಳನ್ನು…
ಇಂದು ಕೆಲವು ಕಡೆ ಗುಡುಗು ಸಹಿತ ಮಳೆಯ ಲಕ್ಷಣವಿದೆ. ರಾಜ್ಯದಲ್ಲಿ ಮಳೆಯ ಪ್ರಮಾಣ…
ಕೃಷಿಕ ಯಶಸ್ವಿಯಾಗಬೇಕಾದರೆ , ಕೃಷಿ ಬೆಳೆಯಬೇಕಾದರೆ,ಉಳಿಯಬೇಕಾದರೆ ತಿಂಗಳಿಗೆ ಒಂದಷ್ಟು ಆದಾಯ ಸಿಗಲೇಬೇಕು. ಮುಖ್ಯ…
ಬಂಡೀಪುರ ಅಭಯಾರಣ್ಯದಲ್ಲಿ ರಾತ್ರಿವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಾರದೆಂದು ಸಂಸತ್ ಸದಸ್ಯ ತೇಜಸ್ವಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸುಳ್ಯ ತಾಲೂಕು ಪಂಚಾಯತ್ ಮಿನಿ ಸಭಾಂಗಣದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ…