ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

June 5, 2026
4:40 PM
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ. ಕೃಷಿ ವಿಜ್ಞಾನ ಮತ್ತು ರೈತರ ನಡುವಿನ ಅಂತರವನ್ನು ಕಡಿಮೆ ಮಾಡುವುದು ಈ ಅಭಿಯಾನದ ಪ್ರಮುಖ ಗುರಿಯಾಗಿತ್ತು.

ದೇಶದ ಕೃಷಿ ಕ್ಷೇತ್ರದಲ್ಲಿ ವಿಜ್ಞಾನ ಮತ್ತು ರೈತರ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’ (VKSA) ದೇಶದಾದ್ಯಂತ 13.4 ಕೋಟಿ ರೈತರನ್ನು ತಲುಪುವ ಮೂಲಕ ಮಹತ್ವದ ಮೈಲಿಗಲ್ಲು ಸಾಧಿಸಿದೆ ಎಂದು ಕೇಂದ್ರ ಕೃಷಿ ಸಚಿವ‌ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ನವದೆಹಲಿದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಅಭಿಯಾನವು ಕೃಷಿ ಸಂಶೋಧನೆ, ವಿಸ್ತರಣಾ ಸೇವೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ವೇದಿಕೆಗೆ ತಂದು ರೈತರೊಂದಿಗೆ ನೇರ ಸಂಪರ್ಕ ಸಾಧಿಸಿದೆ ಎಂದು ಹೇಳಿದರು. ದೇಶದ 1.43 ಲಕ್ಷಕ್ಕೂ ಹೆಚ್ಚು ಗ್ರಾಮಗಳಲ್ಲಿ 60 ಸಾವಿರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಬುಡಕಟ್ಟು ಜಿಲ್ಲೆಗಳಿಗೂ ವಿಶೇಷ ಆದ್ಯತೆ ನೀಡಲಾಗಿದೆ.

ಕೃಷಿ ವಿಜ್ಞಾನಿಗಳಿಂದ ಅಭಿವೃದ್ಧಿಪಡಿಸಲಾದ ಹೊಸ ತಂತ್ರಜ್ಞಾನ, ಉತ್ತಮ ಬೀಜಗಳು, ಮಣ್ಣಿನ ಆರೋಗ್ಯ ನಿರ್ವಹಣೆ, ನೈಸರ್ಗಿಕ ಕೃಷಿ ಹಾಗೂ ಉತ್ಪಾದನೆ ಹೆಚ್ಚಿಸುವ ವಿಧಾನಗಳನ್ನು ರೈತರಿಗೆ ನೇರವಾಗಿ ತಲುಪಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿತ್ತು. “ಲ್ಯಾಬ್ ಟು ಲ್ಯಾಂಡ್” (ಪ್ರಯೋಗಾಲಯದಿಂದ ಕೃಷಿಭೂಮಿವರೆಗೆ) ಎಂಬ ಪರಿಕಲ್ಪನೆಯಡಿ ರೈತರ ಸಮಸ್ಯೆಗಳನ್ನು ಆಲಿಸಿ, ಸ್ಥಳೀಯ ಪರಿಹಾರಗಳನ್ನು ಒದಗಿಸುವ ಕಾರ್ಯ ನಡೆಯಿತು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಅಭಿಯಾನಕ್ಕಾಗಿ ದೇಶದಾದ್ಯಂತ ಸಾವಿರಾರು ಕೃಷಿ ವಿಜ್ಞಾನಿಗಳು ಹಾಗೂ ತಜ್ಞರ ತಂಡಗಳನ್ನು ಗ್ರಾಮಗಳಿಗೆ ಕಳುಹಿಸಲಾಗಿತ್ತು. ರೈತರು ತಮ್ಮ ಅನುಭವಗಳು, ಸಮಸ್ಯೆಗಳು ಮತ್ತು ಹೊಸ ಆವಿಷ್ಕಾರಗಳನ್ನು ವಿಜ್ಞಾನಿಗಳೊಂದಿಗೆ ಹಂಚಿಕೊಂಡಿದ್ದು, ಭವಿಷ್ಯದ ಕೃಷಿ ನೀತಿಗಳ ರೂಪಿಕರಣಕ್ಕೂ ಇದು ನೆರವಾಗಲಿದೆ ಎಂದು ಸಚಿವರು ಹೇಳಿದರು.

ಅಭಿಯಾನ ಮುಕ್ತಾಯಗೊಂಡರೂ ರೈತರೊಂದಿಗೆ ನೇರ ಸಂಪರ್ಕ ಕಾರ್ಯಕ್ರಮ ಮುಂದುವರಿಯಲಿದೆ. ಸರ್ಕಾರದ ಅಧಿಕಾರಿಗಳು ಮತ್ತು ಕೃಷಿ ವಿಜ್ಞಾನಿಗಳು ಮುಂದೆಯೂ ಗ್ರಾಮಗಳಿಗೆ ಭೇಟಿ ನೀಡಿ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಿದ್ದಾರೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದರು.

Union Agriculture Minister Shivraj Singh Chouhan said that the Viksit Krishi Sankalp Abhiyan has directly engaged 13.4 crore farmers across 1.43 lakh villages in India. The campaign aimed to bridge the gap between agricultural research and field-level farming by taking scientific knowledge, modern technologies and practical solutions directly to farmers.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್‌ಗೆ ಮಂಗಳೂರಿನಲ್ಲಿ ಅಭಿನಂದನೆ – ಪುಟ್ಟ ಕಲಾವಿದನ ಸಾಧನೆಯ ಹಿಂದಿನ ಪಯಣಕ್ಕೆ ಮೆಚ್ಚುಗೆ
September 14, 2026
2:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?
September 14, 2026
12:51 PM
by: ಸಾಯಿಶೇಖರ್ ಕರಿಕಳ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ
September 14, 2026
11:33 AM
by: ದ ರೂರಲ್ ಮಿರರ್.ಕಾಂ
ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ
September 14, 2026
11:07 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror