ಜೋಯಿಡಾದ ಗ್ರಾಮದಲ್ಲಿ ಸೇತುವೆ ಕುಸಿತ | ತಾತ್ಕಾಲಿಕ ಕಾಲು ಸಂಕ ನಿರ್ಮಾಣ |

July 9, 2025
10:57 AM

ಜೋಯಿಡಾ ತಾಲೂಕಿನ ಬಜಾರಕುಣಂಗ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೀಸೈ ಗ್ರಾಮದಲ್ಲಿ ಭಾರೀ ಮಳೆಯಿಂದ ಮೂಲ ಸೇತುವೆ ಮುರಿದುಹೋಗಿದ್ದ ಕಾರಣ ಗ್ರಾಮಸ್ಥರಿಗೆ ಸಂಚಾರದಲ್ಲಿ ತೀವ್ರ ಅಡಚಣೆ ಉಂಟಾಗಿತ್ತು. ಈ ಬಗ್ಗೆ ಸುದ್ದಿಗಳು ಪತ್ರಿಕೆಗಳಲ್ಲಿ ಪ್ರಕಟವಾಗಿತ್ತು.

ಸೇತುವೆ ಕುಸಿತವಾದ ಕಾರಣದಿಂದ  ಸ್ಥಳೀಯ ಯುವಕರು ಜೀವದ ಹಂಗುತೊರೆದು ನೀರಿನಲ್ಲಿ ಬೈಕ್ ಮೂಲಕ ಸಂಚರಿಸುತ್ತಿದ್ದ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿದ ಹಿರಿಯ ಅಧಿಕಾರಿಗಳು , ಸ್ಥಳೀಯರ  ಸಹಕಾರದಿಂದ ತಾತ್ಕಾಲಿಕ ಕಾಲು ಸಂಕವನ್ನು ನಿರ್ಮಿಸಲು ಕ್ರಮ ಕೈಗೊಂಡರು. ಈ ಕಾರ್ಯಕ್ಕೆ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಶಾಸಕ ಆರ್.ವಿ. ದೇಶಪಾಂಡೆ ಅವರು ಕೂಡಾ ಈ ವಿಷಯದಲ್ಲಿ ಚುರುಕಾಗಿ ಸ್ಪಂದನೆ ನೀಡಿದ್ದು, ತಾತ್ಕಾಲಿಕ ಕಾಲು ಸಂಕ ತಕ್ಷಣ ನಿರ್ಮಿಸಲು ಸೂಚನೆ ನೀಡಿದ್ದರು. ಜೊತೆಗೆ, ಮಳೆಗಾಲ ಮುಗಿಯುತ್ತಿದ್ದಂತೆ ಮೂಲ ಸೇತುವೆಯ ಪುನರ್ ನಿರ್ಮಾಣದ ಕೆಲಸ ಆರಂಭಿಸಲು ಜಿ.ಪಂ ಅಧಿಕಾರಿಗಳಿಗೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

(ಮೂಲ ಮಾಹಿತಿ : ದೀಪಕ್‌ ಜೋಯಿಡಾ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror