ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬುವರ ಮೇಲೆ ದಾಳಿ ಮಾಡಿದ ಚಿರತೆಯನ್ನು ಕೆರೇನಹಳ್ಳಿ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಮಧ್ಯಾಹ್ನ ಕೆರೇನಹಳ್ಳಿ ಗ್ರಾಮದ ಕೃಷ್ಣಪ್ಪ ತಮ್ಮ ಗ್ರಾಮದ ಸಮೀಪ ಕುರಿಗಳನ್ನು ಮೇಯಿಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಮೇಲೆ ಚಿರತೆ ಏಕಾಏಕಿ ದಾಳಿ ಮಾಡಿದೆ. ಈ ವೇಳೆ ಅವರು ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ. ವಿಷಯ ತಿಳಿದ ಕೆರೇನಹಳ್ಳಿ, ವರ್ಲಕೊಂಡ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಜನರು ದೊಣ್ಣೆ, ಬಲೆ ಹಿಡಿದು ಸ್ಥಳಕ್ಕೆ ಬಂದು. ಪೊದೆಗಳ ಮಧ್ಯೆ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel