ಇದನ್ನು ಮೂಡನಂಬಿಕೆ ಅನ್ನಬೇಕೋ, ಹಿರಿಯರ ನಂಬಿಕೆ ಅನ್ನಬೇಕೋ….?. ಊರ ಜನಕ್ಕೆ ಮಳೆ ಬೇಕೇ ಬೇಕೂ. ಅದಕ್ಕಾಗಿ ಅವರು ಅದೇನೇನು ಸಾಧ್ಯವೋ ಅದನ್ನೆಲ್ಲಾ ಮಾಡ್ತಾರೆ. ಈಗ ಆಗಿರುವುದು ಅದೇ. ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ. ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ. ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ. ಹೀಗಾದರು ಮಳೆ ಬಂದು ಸಮೃದ್ಧಿಯಾದ ಬೆಳೆ ಬಂದು ರೈತ, ನಾಡಿನ ಜನತೆ ನೆಮ್ಮದಿಯ ಜೀವನ ಮಾಡಿದರೆ ಸಾಕು.
ಕೃಷಿ ಸವಾಲು, ಕೃಷಿ ಕಷ್ಟ, ಕೃಷಿ ಇನ್ನು ಸಾಧ್ಯವೇ ಇಲ್ಲ ಎನ್ನುವ ನೆಗೆಟಿವ್…
7.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಆಧಾರ್ ದೃಢೀಕರಣವನ್ನು ಬಳಸಿಕೊಂಡು ಚಾರ್ ಧಾಮ್ ಮತ್ತು…
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದ ಬಳಿ ಹೇಮಾವತಿ ನದಿ ನೀರಿಗೆ…
ಬೇಸಿಗೆ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಗಮನದಲ್ಲಿಟ್ಟುಕೊಂಡು ಮಧ್ಯ ರೈಲ್ವೆಯು ಛತ್ರಪತಿ ಶಿವಾಜಿ…
ಬೇಸಿಗೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಲು ಪ್ರಮುಖ ಜಲಾಶಯಗಳ ನಿರ್ವಹಣೆ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490