Advertisement
MIRROR FOCUS

#NoRain | ರಾಜ್ಯಾದ್ಯಂತ ಬರದ ಛಾಯೆ | ವರುಣನಿಗಾಗಿ ಪರಿತಪಿಸುತ್ತಿರುವ ಜನ | ಮಳೆಗಾಗಿ ಮಕ್ಕಳ ಮದುವೆ ಮಾಡಿಸಿದ ಗ್ರಾಮಸ್ಥರು |

Share

ಇದನ್ನು ಮೂಡನಂಬಿಕೆ ಅನ್ನಬೇಕೋ, ಹಿರಿಯರ ನಂಬಿಕೆ ಅನ್ನಬೇಕೋ….?. ಊರ ಜನಕ್ಕೆ ಮಳೆ ಬೇಕೇ ಬೇಕೂ. ಅದಕ್ಕಾಗಿ ಅವರು ಅದೇನೇನು ಸಾಧ್ಯವೋ ಅದನ್ನೆಲ್ಲಾ ಮಾಡ್ತಾರೆ. ಈಗ ಆಗಿರುವುದು ಅದೇ. ಮಳೆಗಾಗಿ ಮಕ್ಕಳ ಅಣಕು ಮದುವೆ ಮಾಡಿಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಗಳಕೊಪ್ಪೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗ್ರಾಮದ ಇಬ್ಬರು ಬಾಲಕರಲ್ಲಿ ಒಬ್ಬ ಹುಡುಗನಿಗೆ ವಧು ವೇಷ ಹಾಕಿ ಮತ್ತೋರ್ವ ಹುಡುಗನಿಗೆ ವರನ ಪೋಷಾಕು ಹಾಕಿ ಶಾಸ್ತ್ರೋಕ್ತವಾಗಿ ಅರ್ಚಕರ ನೇತೃತ್ವದಲ್ಲಿ ಅಣಕು ಮದುವೆ ಮಾಡುವ ಮೂಲಕ ಮಳೆಗಾಗಿ ಗ್ರಾಮಸ್ಥರು ಮೊರೆಯಿಟ್ಟಿದ್ದಾರೆ. ಗ್ರಾಮದ ಮಧ್ಯಭಾಗದ ಬೀದಿಯಲ್ಲಿ ಮಹಿಳೆಯರೆಲ್ಲ ಕೂತು ಸೋಬಾನೆ ಗೀತೆ ಹಾಡಿ ಮದುವೆಯಲ್ಲಿ ಭಾಗಿಯಾಗಿದ್ದಾರೆ. ಚಿಕ್ಕ ಬಾಲಕರು ಥೇಟ್ ವರ-ವಧುವಿನಂತೆ ಕಂಗೊಳಿಸಿದ್ದಾರೆ. ವರನ ಪೋಷಾಕುನಲ್ಲಿದ್ದ ಬಾಲಕ ವಧು ವೇಷದಲ್ಲಿದ್ದ ಮತ್ತೋರ್ವ ಬಾಲಕನಿಗೆ ಅರಿಶಿನ ಕೊಂಬು (ತಾಳಿ) ಕಟ್ಟುವ ಮೂಲಕ ಮದುವೆ ಮಾಡಲಾಗಿದೆ. ಅಂದಹಾಗೆ ಮಳೆ ಬಾರದಂತಹ ಸಂದರ್ಭದಲ್ಲಿ ಈ ರೀತಿ ಮಕ್ಕಳಿಗೆ ಮದುವೆ ಮಾಡಿಸಿ ಮಳೆಗಾಗಿ ಪ್ರಾರ್ಥಿಸಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಜನರದ್ದು. ಹೀಗಾಗಿ ಮಕ್ಕಳ ಮದುವೆ ಮಾಡಿಸಲಾಗಿದೆ.

 

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಬಾರಿ ನೀರಿಕ್ಷಿಸಿದಷ್ಟು ಮಳೆ ಬಾರದೆ ಇದ್ದುದರಿಂದ ರಾಗಿ, ಮೆಕ್ಕೆಜೋಳ, ಅವರೆ, ತೊಗರಿ ಸೇರಿದಂತೆ ಮಳೆಯಾಶ್ರಿತ ಬೆಳೆಗಳೆಲ್ಲವೂ ಒಣಗಿ ಬಾಡಿ ಹೋಗುತ್ತಿವೆ. ಹೀಗಾಗಿ ಅನ್ನದಾತರು ಆಕಾಶದತ್ತ ಮುಖ ಮಾಡಿ ಮಳೆ ಯಾವಾಗ ಬರುತ್ತದೆ ಎಂದು ಕಾದು ನೋಡುವಂತಾಗಿದೆ. ಮಳೆಗಾಗಿ ಹಾತೊರೆಯುತ್ತಿರುವ ಜನರು ಹಳೆಯ ಸಂಪ್ರದಾಯಗಳ ಮೊರೆ ಹೋಗಿದ್ದಾರೆ. ಹೀಗಾದರು ಮಳೆ ಬಂದು ಸಮೃದ್ಧಿಯಾದ ಬೆಳೆ ಬಂದು ರೈತ, ನಾಡಿನ ಜನತೆ ನೆಮ್ಮದಿಯ ಜೀವನ ಮಾಡಿದರೆ ಸಾಕು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

6 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

7 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

8 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

11 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

22 hours ago