ಈ ಹಳ್ಳಿಯಲ್ಲಿ 18 ವರ್ಷದ ಕೆಳಗಿನ ಮಕ್ಕಳು ಮೊಬೈಲ್ ಫೋನ್ ಬಳಕೆ ಮಾಡುವಂತಿಲ್ಲ…! | ಬಳಕೆ ಮಾಡಿದರೆ ದಂಡ ಖಚಿತ |

November 18, 2022
4:25 PM

ಈ ಹಳ್ಳಿಯಲ್ಲಿ 18 ವರ್ಷದೊಳಗಿನವರು ಮೊಬೈಲ್ ಬಳಸುವಂತಿಲ್ಲ.ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂಬ ನಿರ್ಧಾರವನ್ನು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಬನ್ಸಿ ಗ್ರಾಮಪಂಚಾಯತ್ ನಿರ್ಧಾರ ಕೈಗೊಂಡಿದೆ.‌ ಈ ನಿರ್ಧಾರ ಈಗ ಪರ ವಿರೋಧ ಚರ್ಚೆಯಾಗುತ್ತಿದ್ದರೂ ಗ್ರಾಮಪಂಚಾಯತ್‌ ತಲೆಕೆಡಿಸಿಕೊಂಡಿಲ್ಲ.

ಕೋವಿಡ್ ಸಮಯದಲ್ಲಿ ಮಕ್ಕಳು ಆನ್‌ಲೈನ್ ತರಗತಿಗಳಿಗೆ ಮೊಬೈಲ್ ಫೋನ್ ಬಳಸಲು ಪ್ರಾರಂಭಿಸಿದರು. ಅಂದಿನಿಂದ ಶಾಲೆ ಪ್ರಾರಂಭವಾದರೂ ಮೊಬೈಲ್‌ ಬಳಕೆ ಮಾತ್ರ ಬಿಟ್ಟಿಲ್ಲ ಎಂದು ಗ್ರಾಮದ ಸರಪಂಚ್ ಗಜಾನನ ಹೇಳಿದರು. ಶಿಕ್ಷಣಕ್ಕಾಗಿ ಆರಂಭಿಸಿರುವ ಫೋನ್ ಗಳು ಮಕ್ಕಳಿಗೂ ಅದೇ ಫೋನ್ ಆಗಿದ್ದು, ಆನ್ ಲೈನ್ ಗೇಮ್ ಹಾಗೂ ಇತರೆ ಸೈಟ್ ಗಳನ್ನು ನೋಡುತ್ತಾ ಸಮಯ ವ್ಯರ್ಥ ಮಾಡುತ್ತಿದ್ದು, ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸುತ್ತಿಲ್ಲ, ಅದಕ್ಕಾಗಿಯೇ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಇಂತಹ ನಿರ್ಧಾರ ಕೈಗೊಳ್ಳಲಾಗಿದೆಯೇ ಹೊರತು ಅವರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಅಲ್ಲ ಎಂದು ಸ್ಪಷ್ಟಪಡಿಸಿದರು. ಇಂತಹ ವಿನೂತನ ನಿರ್ಧಾರ ಕೈಗೊಂಡ ಮೊದಲ ಪಂಚಾಯತ್ ಎಂಬ ಹೆಗ್ಗಳಿಕೆಗೆ ನಮ್ಮ ಗ್ರಾಮ ಪಾತ್ರವಾಗಿದೆ ಎಂದರು.‌

ಈ ನಿರ್ಧಾರವನ್ನು ಕಾರ್ಯಗತಗೊಳಿಸಲು ವಿರೋಧವಿರುತ್ತದೆ. ಹಾಗಾಗಿ ಇದನ್ನು ಕಾರ್ಯರೂಪಕ್ಕೆ ತರಲು ಮಕ್ಕಳಿಗೆ ಹಾಗೂ ಪೋಷಕರಿಗೆ ಕೌನ್ಸೆಲಿಂಗ್ ನೀಡುತ್ತಿದ್ದೇವೆ ಎಂದರು. ಕೌನ್ಸೆಲಿಂಗ್ ನಂತರವೂ ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂದು ಸರಪಂಚ್ ಗಜಾನನ ಸ್ಪಷ್ಟಪಡಿಸಿದರು. ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದತ್ತ ಸೆಳೆಯುವುದು ಈ ನಿರ್ಧಾರದ‌ ಸ್ಪಷ್ಟ ಉದ್ದೇಶವಾಗಿದೆ ಎಂದು ಸರಪಂಚ್ ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror