ಈ ಹಳ್ಳಿಯಲ್ಲಿ 18 ವರ್ಷದೊಳಗಿನವರು ಮೊಬೈಲ್ ಬಳಸುವಂತಿಲ್ಲ.ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂಬ ನಿರ್ಧಾರವನ್ನು ಮಹಾರಾಷ್ಟ್ರದ ಯವತ್ಮಾಲ್ ಜಿಲ್ಲೆಯ ಬನ್ಸಿ ಗ್ರಾಮಪಂಚಾಯತ್ ನಿರ್ಧಾರ ಕೈಗೊಂಡಿದೆ. ಈ ನಿರ್ಧಾರ ಈಗ ಪರ ವಿರೋಧ ಚರ್ಚೆಯಾಗುತ್ತಿದ್ದರೂ ಗ್ರಾಮಪಂಚಾಯತ್ ತಲೆಕೆಡಿಸಿಕೊಂಡಿಲ್ಲ.
ಕೋವಿಡ್ ಸಮಯದಲ್ಲಿ ಮಕ್ಕಳು ಆನ್‌ಲೈನ್ ತರಗತಿಗಳಿಗೆ ಮೊಬೈಲ್ ಫೋನ್ ಬಳಸಲು ಪ್ರಾರಂಭಿಸಿದರು. ಅಂದಿನಿಂದ ಶಾಲೆ ಪ್ರಾರಂಭವಾದರೂ ಮೊಬೈಲ್ ಬಳಕೆ ಮಾತ್ರ ಬಿಟ್ಟಿಲ್ಲ ಎಂದು ಗ್ರಾಮದ ಸರಪಂಚ್ ಗಜಾನನ ಹೇಳಿದರು. ಶಿಕ್ಷಣಕ್ಕಾಗಿ ಆರಂಭಿಸಿರುವ ಫೋನ್ ಗಳು ಮಕ್ಕಳಿಗೂ ಅದೇ ಫೋನ್ ಆಗಿದ್ದು, ಆನ್ ಲೈನ್ ಗೇಮ್ ಹಾಗೂ ಇತರೆ ಸೈಟ್ ಗಳನ್ನು ನೋಡುತ್ತಾ ಸಮಯ ವ್ಯರ್ಥ ಮಾಡುತ್ತಿದ್ದು, ಶಿಕ್ಷಣದ ಬಗ್ಗೆಯೂ ಕಾಳಜಿ ವಹಿಸುತ್ತಿಲ್ಲ, ಅದಕ್ಕಾಗಿಯೇ ಈ ನಿರ್ಧಾರಕ್ಕೆ ಬಂದಿದ್ದೇವೆ ಎಂದರು. ಮಕ್ಕಳ ಭವಿಷ್ಯಕ್ಕಾಗಿ ಇಂತಹ ನಿರ್ಧಾರ ಕೈಗೊಳ್ಳಲಾಗಿದೆಯೇ ಹೊರತು ಅವರ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಅಲ್ಲ ಎಂದು ಸ್ಪಷ್ಟಪಡಿಸಿದರು. ಇಂತಹ ವಿನೂತನ ನಿರ್ಧಾರ ಕೈಗೊಂಡ ಮೊದಲ ಪಂಚಾಯತ್ ಎಂಬ ಹೆಗ್ಗಳಿಕೆಗೆ ನಮ್ಮ ಗ್ರಾಮ ಪಾತ್ರವಾಗಿದೆ ಎಂದರು.
ಈ ನಿರ್ಧಾರವನ್ನು ಕಾರ್ಯಗತಗೊಳಿಸಲು ವಿರೋಧವಿರುತ್ತದೆ. ಹಾಗಾಗಿ ಇದನ್ನು ಕಾರ್ಯರೂಪಕ್ಕೆ ತರಲು ಮಕ್ಕಳಿಗೆ ಹಾಗೂ ಪೋಷಕರಿಗೆ ಕೌನ್ಸೆಲಿಂಗ್ ನೀಡುತ್ತಿದ್ದೇವೆ ಎಂದರು. ಕೌನ್ಸೆಲಿಂಗ್ ನಂತರವೂ ಮಕ್ಕಳು ಮೊಬೈಲ್ ಬಳಸಿದರೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂದು ಸರಪಂಚ್ ಗಜಾನನ ಸ್ಪಷ್ಟಪಡಿಸಿದರು. ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದತ್ತ ಸೆಳೆಯುವುದು ಈ ನಿರ್ಧಾರದ ಸ್ಪಷ್ಟ ಉದ್ದೇಶವಾಗಿದೆ ಎಂದು ಸರಪಂಚ್ ಸ್ಪಷ್ಟಪಡಿಸಿದ್ದಾರೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…