#ViralVideo | ಸುಳ್ಯ-ಸುಬ್ರಹ್ಮಣ್ಯ ರಸ್ತೆ | ಮಳೆಗೆ ಟ್ರೋಲ್‌ಗೆ ಒಳಗಾದ ಹೆದ್ದಾರಿ…. ! |

July 6, 2023
7:38 PM
ಗ್ರಾಮೀಣ ಭಾಗದಲ್ಲಿ ಚರಂಡಿ ವ್ಯವಸ್ಥೆ ಸರಿ ಇಲ್ಲದೆ ರಸ್ತೆಯಲ್ಲೇ ನೀರು ಹರಿಯುವ ಸನ್ನಿವೇಶ ಸೃಷ್ಟಿಯಾಗಿದೆ.

ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿದೆ. ಮಳೆಗೆ ಗೊಳೆ, ನದಿಗಳು ತುಂಬಿ ಹರಿಯುತ್ತದೆ. ಆದರೆ ರಸ್ತೆಯಲ್ಲೂ ನೀರು ಹರಿಯುವುದು ಕೂಡಾ ಈ ಬಾರಿ ಕಂಡಿದೆ. ಚರಂಡಿ ವ್ಯವಸ್ಥೆ ಸರಿ ಇಲ್ಲದೆ ಬಹುತೇಕ ರಸ್ತೆಗಳಲ್ಲಿ ನೀರು ಹರಿಯುತ್ತಿದೆ. ಆದರೆ ಇಲ್ಲಿ ಕಳೆದ ಹಲವಾರು ವರ್ಷಗಳಿಂದ ರಸ್ತೆಯಲ್ಲಿ ನೀರು ಹರಿಯುತ್ತದೆ. ಇದನ್ನೇ ಇರಿಸಿಕೊಂಡು ಟ್ರೋಲ್‌ ಮಾಡಿದ್ದಾರೆ ಗ್ರಾಮೀಣ ಜನರು.

ವೈರಲ್‌ ಆಗಿರುವ ವಿಡಿಯೋ:

ಇದು ಸುಳ್ಯ-ಸುಬ್ರಹ್ಮಣ್ಯ ರಸ್ತೆ. ಹೇಳುವುದಕ್ಕೆ ರಾಜ್ಯ ಹೆದ್ದಾರಿ. ರಾಷ್ಟ್ರೀಯ ಹೆದ್ದಾರಿಯ ಸ್ಥಾನದಲ್ಲಿದೆ. ಈ ರಸ್ತೆಯಲ್ಲಿ ದೇವಚಳ್ಳ ಗ್ರಾಮದ ತಳೂರು ಎಂಬಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಯಲ್ಲಿಯೇ ನೀರು ಹರಿಯುತ್ತಿದೆ. ವಿಪರೀತ ಮಳೆಯಾದರೆ ರಸ್ತೆಯಲ್ಲಿ ಹೋಗುವುದೇ ಸಾಹಸದ ಕೆಲಸ. ವಾಹನ ಚಾಲಕರು ಪರದಾಟ ನಡೆಸುತ್ತಾರೆ. ಇದೀಗ ಎರಡು ದಿನದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿತ್ತು. ಈ ಸಮಸ್ಯೆ ಬಗ್ಗೆ ಹಲವು ಬಾರಿ ಇಲ್ಲಿನ ಆಡಳಿತದ ಗಮನಕ್ಕೆ ತಂದರೂ ಸರಿಯಾಗದ ಕಾರಣ ಈ ಬಾರಿ ಟ್ರೋಲ್‌ ಮಾಡಿದ್ದಾರೆ ಸಂಕಷ್ಟಕ್ಕೆ ಒಳಗಾದ ವಾಹನ ಚಾಲಕರು. ಇಲಾಖೆಗಳಿಗೆ ಇದು ತಲುಪಿದರೆ ದುರಸ್ತಿಗೆ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಕುಟುಂಬದ ಸೌಂದರ್ಯ ವೈಭವದಲ್ಲಲ್ಲ, ಸೌಹಾರ್ದತೆಯಲ್ಲಿ: ಸಂಬಂಧ ಉಳಿಸುವುದೇ ನಿಜವಾದ ಗೆಲುವು
September 26, 2026
7:21 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹವಾಮಾನ ಬದಲಾವಣೆ ತಡೆಯಲು ಕಾನೂನು ಮಾತ್ರ ಸಾಲದು – ಸಾಮೂಹಿಕ ಪ್ರಯತ್ನ ಅಗತ್ಯ
September 26, 2026
7:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26.09.2026 | ಸೆ.28ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು: ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
September 26, 2026
1:35 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror