ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು(ನ.21) ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪೆಟ್ರೋಲಿಯಂ ವಿಶ್ವವಿದ್ಯಾಲಯದ ಮೊನೊಕ್ರಿಸ್ಟಲೈನ್ ಸೋಲಾರ್ ಫೋಟೋ ವಲ್ಟೈಕ್ ಪ್ಯಾನಲ್ ನ 45 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಘಟಕವನ್ನು ವರ್ಚುವಲ್ ಕಾರ್ಯಕ್ರಮದ ಮೂಲಕ ಉದ್ಘಾಟಿಸಿ ಘಟಿಕೋತ್ಸವದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕೊರೊನಾದ ಕಾಲದಲ್ಲಿ ಇಂಧನ ವಲಯದಲ್ಲಿ ಬಹಳ ಸವಾಲುಗಳು, ಸಮಸ್ಯೆಗಳು ಇರುವ ಸಂದರ್ಭದಲ್ಲಿ ಇಂಧನ ವಲಯ ಕ್ಷೇತ್ರಕ್ಕೆ ಕಾಲಿಟ್ಟಿದ್ದೀರಿ, ಈ ಸಮಯದಲ್ಲಿ ಉದ್ಯಮಶೀಲರಾಗಿ ಬೆಳೆಯಲು ನಿಮ್ಮ ಮುಂದೆ ಸಾಕಷ್ಟು ಅವಕಾಶಗಳಿವೆ. ದೇಶದಲ್ಲಿ ಇಂಗಾಲದ ಬಳಕೆಯನ್ನು ಕಡಿಮೆ ಮಾಡುವ ಗುರಿಯಿದ್ದು, ಆ ನಿಟ್ಟಿನಲ್ಲಿ ಉತ್ಪಾದನೆ ಶೇಕಡಾ 30ರಿಂದ 35ರಷ್ಟು ಕಡಿಮೆಯಾಗಬೇಕಿದೆ. ಈ ದಶಕದಲ್ಲಿ ಇಂಧನ ಅಗತ್ಯಗಳಿಗೆ ನೈಸರ್ಗಿಕ ಅನಿಲವನ್ನು 4 ಪಟ್ಟು ಹೆಚ್ಚು ಬಳಕೆ ಮಾಡುವ ಅಗತ್ಯವಿದೆ ಎಂದು ಅವರು ಹೇಳಿದರು.
21ನೇ ಶತಮಾನದ ಯುವಜನತೆ ನಿಷ್ಕಳಂಕವಾಗಿ ಸ್ವಚ್ಛ ಮನಸ್ಸು, ಹೃದಯದಿಂದ ಸ್ಪಷ್ಟ ಗುರಿ ಮತ್ತು ಉದ್ದೇಶದೊಂದಿಗೆ ಮುಂದೆ ಸಾಗಬೇಕು. ಮನುಷ್ಯನಿಗೆ ಜವಾಬ್ದಾರಿ ಬಂದರೆ ಜೀವನದಲ್ಲಿ ಅವಕಾಶಗಳು ಸಿಗುತ್ತವೆ. ಹೊರೆಯ ಭಾವವನ್ನು ಇಟ್ಟುಕೊಂಡು ಬದುಕುವವರು ಯಾವತ್ತಿಗೂ ಉದ್ಧಾರವಾಗುವುದಿಲ್ಲ, ಜೀವನದಲ್ಲಿ ಸೋಲುತ್ತಾರೆ ಎಂದು ಮೋದಿಯವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…