ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಹಾಗೂ ಎಸೆಯುವುದು ಕಡಿಮೆ ಮಾಡಲು ಪುಣೆಯ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಅಧಿಕಾರಿಗಳು ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ. ಇದರ ಭಾಗವಾಗಿ ಪೂನಾದಲ್ಲಿ ಮೂರು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅಲ್ಲಿ ಪ್ಲಾಸ್ಟಿಕ್ ಬಾಟಲಿಗಳನ್ನು ಕೊಟ್ಟರೆ ವಡಾ ಪಾವ್ ಅನ್ನು ಉಚಿತವಾಗಿ ಪಡೆಯಬಹುದು ಎಂದು ಮಾಹಿತಿ ನೀಡಿದ್ದಾರೆ.
ಇದನ್ನು ಗಮನಿಸಿ ಅನೇಕರು ಪ್ರತಿದಿನ ಪ್ಲಾಸ್ಟಿಕ್ ಬಾಟಲಿಗಳನ್ನು ತಂದು ಕೊಡುತ್ತಿದ್ದಾರೆ. ನಂತರ ಇಲ್ಲಿಂದ ವಡಾ ಪಾವ್ ಮತ್ತು ಚಹಾವನ್ನು ತೆಗೆದುಕೊಂಡು ಕುಡಿಯುತ್ತಾರೆ. ಈ ವಿಶೇಷ ಮಳಿಗೆಗಳಿಗೆ ಪಿಂಪ್ರಿ ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಶನ್‌ನಿಂದ ಹಣ ನೀಡಲಾಗುತ್ತದೆ.
ಸ್ವೀಕರಿಸಿದ ಪ್ಲಾಸ್ಟಿಕ್ ಮರುಬಳಕೆಗಾಗಿ ಕೆಲವು ಕಂಪನಿಗಳಿಗೆ ಹಿಂತಿರುಗಿಸಲಾಗುತ್ತದೆ. ಇದರಿಂದ ಜನರು ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯುವುದನ್ನು ತಡೆಯಬಹುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ. ಈ ಆದೇಶದಲ್ಲಿ ಯಶವಂತ್ ರಾವ್ ಚವ್ಹಾಣ ಮಾರ್ಗ ಪಿಂಪ್ರಿ, ಕೇಶವ ನಗರ ಶಾಸ್ತ್ರಿನಗರ ಕಾಸರ್ ವಾಡಿ ಮತ್ತು ಸಂತ ಗಜಾನನ ಮಂದಿರ ಚಿಂಚ್ ವಾಡಾದಲ್ಲಿ ಶಾಖೆಗಳನ್ನು ಸ್ಥಾಪಿಸಲಾಗಿದೆ ಎಂದು ಮುಖ್ಯ ಆರೋಗ್ಯಾಧಿಕಾರಿ ಡಾ.ಅನಿಲ್ ರಾಯ್ ತಿಳಿಸಿದ್ದಾರೆ. ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದರು. ಮುಂದಿನ ದಿನಗಳಲ್ಲಿ ಇನ್ನಷ್ಟು ಮಳಿಗೆಗಳನ್ನು ತೆರೆಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…